ಸಾಂದರ್ಭಿಕ ಚಿತ್ರ 
ವಾಣಿಜ್ಯ

ಅಕ್ಟೋಬರ್‌ನಲ್ಲಿ ದಾಖಲೆಯ 1.52 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಕಳೆದ ಅಕ್ಟೋಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 16.5 ರಷ್ಟು ಏರಿಕೆಯಾಗಿದ್ದು, ಜಿಎಸ್ ಟಿ ಕಲೆಕ್ಷನ್ ದಾಖಲೆಯ 1.52 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ ಮತ್ತು ಇದು ಇದುವರೆಗಿನ...

ನವದೆಹಲಿ: ಕಳೆದ ಅಕ್ಟೋಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 16.5 ರಷ್ಟು ಏರಿಕೆಯಾಗಿದ್ದು, ಜಿಎಸ್ ಟಿ ಕಲೆಕ್ಷನ್ ದಾಖಲೆಯ 1.52 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ ಮತ್ತು ಇದು ಇದುವರೆಗಿನ ಎರಡನೇ ಅತಿ ಹೆಚ್ಚು ಸಂಗ್ರಹವಾಗಿದೆ.

ಹಬ್ಬದ ದಿನಗಳು ತೆರಿಗೆ ಸಂಗ್ರಹ ಹೆಚ್ಚಳ ಪ್ರವೃತ್ತಿ ಮುಂದುವರಿಯಲು ಸಹಾಯ ಮಾಡಿದ್ದು, ಅಕ್ಟೋಬರ್​ನಲ್ಲಿ 1,51,718 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಜಿಎಸ್​ಟಿ 26,039 ಕೋಟಿ ರೂ. ಹಾಗೂ ರಾಜ್ಯ ಜಿಎಸ್​ಟಿ 33,396 ಕೋಟಿ ರೂ. ಸಂಗ್ರಹವಾಗಿದೆ.

ಅಕ್ಟೋಬರ್ 2022 ರಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್​​ಟಿ ಆದಾಯ ಕಳೆದ ವರ್ಷದ ಅಕ್ಟೋಬರ್ ಗಿಂತ ಶೇ. 16.6 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.

ಈ ಹಿಂದೆ ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಅದು ಬಿಟ್ಟರೆ ಈಗ ಅಕ್ಟೋಬರ್​ನಲ್ಲಿ ಆಗಿರುವ 1.51 ಲಕ್ಷ ಕೋಟಿ ರೂ. ಸಂಗ್ರಹ ಎರಡನೇ ಅತಿಹೆಚ್ಚಿನ ಸಂಗ್ರಹವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT