ಸಾಂದರ್ಭಿಕ ಚಿತ್ರ 
ವಾಣಿಜ್ಯ

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್, ಮೆಟಾ ನೀತಿ ಮುಖ್ಯಸ್ಥ ರಾಜೀವ್ ರಾಜೀನಾಮೆ

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಮೆಟಾ ಸಾರ್ವಜನಿಕ ನೀತಿ ಮುಖ್ಯಸ್ಥ ರಾಜೀವ್ ಅಗರ್ವಾಲ್ ಅವರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪ್ರಮುಖ ಮೆಟಾ ಮಂಗಳವಾರ...

ನವದೆಹಲಿ: ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಮೆಟಾ ಸಾರ್ವಜನಿಕ ನೀತಿ ಮುಖ್ಯಸ್ಥ ರಾಜೀವ್ ಅಗರ್ವಾಲ್ ಅವರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪ್ರಮುಖ ಮೆಟಾ ಮಂಗಳವಾರ ತಿಳಿಸಿದೆ.

ಮೆಟಾ ಜಗತ್ತಿನಾದ್ಯಂತ 11,000 ಉದ್ಯೋಗಿಗಳನ್ನು ವಜಾಗೊಳಿಸಿದ ಒಂದು ವಾರದಲ್ಲಿಯೇ ಈ ಬೆಳವಣಿಗೆ ನಡೆದಿದೆ.

ಪ್ರಸ್ತುತ ಭಾರತದಲ್ಲಿ ವಾಟ್ಸಾಪ್ ಸಾರ್ವಜನಿಕ ನೀತಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಶಿವನಾಥ್ ತುಕ್ರಾಲ್ ಅವರಿಗೆ ಕಂಪನಿಯು ಮೆಟಾ ಇಂಡಿಯಾ ಸಾರ್ವಜನಿಕ ನೀತಿಯ ಜವಾಬ್ದಾರಿ ನೀಡಿದೆ.

"ಭಾರತದಲ್ಲಿ ನಮ್ಮ ಮೊದಲ ವಾಟ್ಸಾಪ್ ಮುಖ್ಯಸ್ಥರಾಗಿ ಅಭಿಜಿತ್ ಬೋಸ್ ಅವರ ಅದ್ಭುತ ಕೊಡುಗೆಗಳನ್ನು ನೀಡಿದ್ದು, ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರ ಉದ್ಯಮಶೀಲ ಪ್ರಯತ್ನವು ನಮ್ಮ ತಂಡವು ಲಕ್ಷಾಂತರ ಜನರು ಮತ್ತು ವ್ಯವಹಾರಗಳಿಗೆ ಪ್ರಯೋಜನಕಾರಿಯಾದ ಹೊಸ ಸೇವೆಗಳನ್ನು ನೀಡಲು ಸಹಾಯ ಮಾಡಿದೆ" ಎಂದು ವಾಟ್ಸಾಪ್ ಮುಖ್ಯಸ್ಥ ವಿಲ್ ಕ್ಯಾಥ್‌ಕಾರ್ಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 2019 ರಲ್ಲಿ ವಾಟ್ಸಾಪ್ ಇಂಡಿಯಾ ಮೊದಲ ಮುಖ್ಯಸ್ಥರಾಗಿ ಬೋಸ್ ಅಧಿಕಾರ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್