ಸಂಗ್ರಹ ಚಿತ್ರ 
ವಾಣಿಜ್ಯ

5,000 ಕೋಟಿ ರೂ. ಹೂಡಿಕೆಯ 2 ಒಪ್ಪಂದಕ್ಕೆ ಫಾಕ್ಸ್‌ಕಾನ್‌ ಸಹಿ!

ತೈವಾನ್ ಮೂಲದ ಐಫೋನ್ ತಯಾರಕ ಫಾಕ್ಸ್‌ಕಾನ್ 13,000 ಉದ್ಯೋಗಗಳನ್ನು ಸೃಷ್ಟಿಸುವ ಅಂದಾಜು 5,000 ಕೋಟಿ ರೂಪಾಯಿ ಹೂಡಿಕೆಯ ಎರಡು ಯೋಜನೆಗಳಿಗೆ ಸಹಿ ಹಾಕಿದ್ದು, ಈ ಮೂಲಕ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.

ಬೆಂಗಳೂರು: ತೈವಾನ್ ಮೂಲದ ಐಫೋನ್ ತಯಾರಕ ಫಾಕ್ಸ್‌ಕಾನ್ 13,000 ಉದ್ಯೋಗಗಳನ್ನು ಸೃಷ್ಟಿಸುವ ಅಂದಾಜು 5,000 ಕೋಟಿ ರೂಪಾಯಿ ಹೂಡಿಕೆಯ ಎರಡು ಯೋಜನೆಗಳಿಗೆ ಸಹಿ ಹಾಕಿದ್ದು, ಈ ಮೂಲಕ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.

ಐಫೋನ್‌ಗಳಿಗೆ ಬೇಕಾದ ಕೇಸಿಂಗ್ ಘಟಕಗಳು ಹಾಗೂ ಚಿಪ್ ತಯಾರಿಕೆಯ ಉಪಕರಣಗಳನ್ನು ತಯಾರಿಸಲು ಕರ್ನಾಟಕ ರಾಜ್ಯದಲ್ಲಿ ಎರಡು ಯೋಜನೆಗಳಲ್ಲಿ 600 ಮಿಲಿಯನ್ ಡಾಲರ್‌ (ಸುಮಾರು 5,000 ಕೋಟಿ ರೂ.) ಮೊತ್ತವನ್ನು ಕಂಪನಿ ಹೂಡಿಕೆ ಮಾಡಲಿದೆ. ಇದರಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

‘ಚೆನ್ನೈನ ಹೋಟೆಲ್ ಲೀಲಾ ಪ್ಯಾಲೇಸ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಫೋನ್ ಎನ್‌ಕ್ಲೋಸರ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಅನುಷ್ಠಾನ ಕುರಿತು ಮಾತುಕತೆ ನಡೆಸಿದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಎರಡು ಒಪ್ಪಂದ ಪತ್ರಗಳಿಗೆ ಸಹಿ ಹಾಕಿದರು’ ಎಂದು ಸಚಿವ ಕೈಗಾರಿಕೆ ಎಂಬಿ ಪಾಟೀಲ್ ಅವರು ಹೇಳಿದರು.

‘ಈ ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ ರೂ.14 ಸಾವಿರ ಕೋಟಿ ಹೂಡಿಕೆ ಆ್ಯಪಲ್ ಫೋನ್ ತಯಾರಿಕಾ ಘಟಕಗಳಿಗೆ ಹೊರತಾದವು. ಇದಕ್ಕೂ ದೊಡ್ಡಬಳ್ಳಾಪುರ ಸಮೀಪ ಭೂಮಿ ನೀಡಲಾಗುವುದು’ ಎಂದು ತಿಳಿಸಿದರು.

12,000 ಉದ್ಯೋಗಗಳನ್ನು ಸೃಷ್ಟಿಸುವ ಐಫೋನ್ ಬಿಡಿಭಾಗಗಳನ್ನು ಉತ್ಪಾದಿಸುವ ಸೌಲಭ್ಯವನ್ನು ಸ್ಥಾಪಿಸಲು ಸುಮಾರು 350 ಮಿಲಿಯನ್ ಡಾಲರ್‌ ಹಣವನ್ನು ಕಂಪನಿ ಹೂಡಿಕೆ ಮಾಡಲಿದೆ. ಇನ್ನೊಂದು ಕಡೆ ಚಿಪ್ ತಯಾರಿಕೆಯ ಸಾಧನಗಳನ್ನು ತಯಾರಿಸಲು ಅಪ್ಲೈಡ್ ಮೆಟೀರಿಯಲ್ಸ್‌ನೊಂದಿಗೆ 250 ಮಿಲಿಯನ್ ಡಾಲರ್‌ ಮೊತ್ತದ ಯೋಜನೆ ಸಂಬಂಧ ಒಪ್ಪಂದ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.

“ಫಾಕ್ಸ್‌ಕಾನ್ ಮತ್ತು ಕರ್ನಾಟಕ ಸರ್ಕಾರದ ನಡುವಿನ ಈ ಒಪ್ಪಂದವು ತಂತ್ರಜ್ಞಾನದ ಪ್ರಗತಿ ಮತ್ತು ರಾಜ್ಯದ ಒಟ್ಟಾರೆ ಸಾಮಾಜಿಕ- ಆರ್ಥಿಕ ಬೆಳವಣಿಗೆಯಲ್ಲಿ ಗಮನಾರ್ಹ ಬದಲಾವಣೆ ತರಲಿದೆ. ಮುಖ್ಯವಾಗಿ ಸಾವಿರಾರು ನುರಿತ ಕೆಲಸಗಾರರಿಗೆ ಉದ್ಯೋಗ ದೊರೆಯುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಲಿರುವ ಫಾಕ್ಸ್‌ಕಾನ್‌ಗೆ ಎಲ್ಲ ರೀತಿಯ ಬೆಂಬಲ ಒದಗಿಸಲು ನಮ್ಮ ಸರ್ಕಾರ ಬದ್ಧ ಎಂದು ಹೇಳಿದರು.

ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಫಾಕ್ಸ್‌ಕಾನ್‌ ಮುಂದೆ ಬಂದಿರುವುದು ಸಂತಸದ ವಿಚಾರ. ಬಂಡವಾಳ ಆಕರ್ಷಣೆ ಮತ್ತು ಕಂಪನಿಗಳಿಗೆ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸಲು ನಮ್ಮ ನೀತಿಗಳು ಪೂರಕವಾಗಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT