ಆರೋಪಿ ಶಂಕರ್ ಮಿಶ್ರಾ 
ವಾಣಿಜ್ಯ

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ್ದ ಮಿಶ್ರಾಗೆ ಏರ್ ಇಂಡಿಯಾದಿಂದ 4 ತಿಂಗಳು ನಿಷೇಧ

ನ್ಯೂಯಾರ್ಕ್‌-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ  ನಾಲ್ಕು ತಿಂಗಳ ಕಾಲ ವಿಮಾನ...

ನವದೆಹಲಿ: ನ್ಯೂಯಾರ್ಕ್‌-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ  ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿದೆ.

ಶಂಕರ್ ಮಿಶ್ರಾ ಅವರು ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ ನಾಲ್ಕು ತಿಂಗಳ ಕಾಲ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ಮಿಶ್ರಾ, ಕಳೆದ ವರ್ಷ ನವೆಂಬರ್ 26 ರಂದು ಏರ್ ಇಂಡಿಯಾ ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ದೆಹಲಿ ಪೊಲೀಸರು ಜನವರಿ 4 ರಂದು ಶಂಕರ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!