ಸೆನ್ಸೆಕ್ಸ್ (ಸಂಗ್ರಹ ಚಿತ್ರ) 
ವಾಣಿಜ್ಯ

ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ: 65,000 ದಾಟಿದ ಸೆನ್ಸೆಕ್ಸ್, 129 ಅಂಕ ಜಿಗಿತ ಕಂಡ ನಿಫ್ಟಿ!

ಷೇರು ಮಾರುಕಟ್ಟೆಯಲ್ಲಿ ಸತತ ನಾಲ್ಕನೇ ದಿನವೂ ಏರಿಕೆ ಮುಂದುವರೆದಿದ್ದು ಮುಂಬೈ ಷೇರುಪೇಟೆ ಸೂಚ್ಯಂಕ(ಬಿಎಸ್‌ಇ) ಸೆನ್ಸೆಕ್ಸ್ 449 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ 65,000ಕ್ಕೆ ತಲುಪಿದೆ.

ಮುಂಬೈ: ಷೇರು ಮಾರುಕಟ್ಟೆಯಲ್ಲಿ ಸತತ ನಾಲ್ಕನೇ ದಿನವೂ ಏರಿಕೆ ಮುಂದುವರೆದಿದ್ದು ಮುಂಬೈ ಷೇರುಪೇಟೆ ಸೂಚ್ಯಂಕ(ಬಿಎಸ್‌ಇ) ಸೆನ್ಸೆಕ್ಸ್ 449 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ 65,000ಕ್ಕೆ ತಲುಪಿದೆ.

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 449.46 ಪಾಯಿಂಟ್‌ಗಳ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 65,168.02 ತಲುಪಿದೆ. ಎನ್‌ಎಸ್‌ಇ ನಿಫ್ಟಿ 128.95 ಪಾಯಿಂಟ್‌ಗಳ ಏರಿಕೆ ಕಂಡು ತನ್ನ ಜೀವಮಾನದ ಗರಿಷ್ಠ 19,318ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ವಹಿವಾಟು ಮತ್ತು ವಿದೇಶಿ ಬಂಡವಾಳದ ಒಳಹರಿವಿನ ಪ್ರಭಾವದಿಂದ ಈ ಏರಿಕೆ ಕಂಡುಬಂದಿದೆ.

ಸೆನ್ಸೆಕ್ಸ್ ಪ್ಯಾಕ್‌ನಿಂದ, ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಹೀಂದ್ರಾ ಮತ್ತು ಮಹೀಂದ್ರಾ, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫಿನ್‌ಸರ್ವ್ ಮತ್ತು ಐಸಿಐಸಿಐ ಬ್ಯಾಂಕ್ ಪ್ರಮುಖ ಲಾಭ ಗಳಿಸಿದ ಸಂಸ್ಥೆಗಳಾದರೆ, ಪವರ್ ಗ್ರಿಡ್, ಮಾರುತಿ, ಟೆಕ್ ಮಹೀಂದ್ರಾ, ಇಂಡಸ್‌ಇಂಡ್ ಬ್ಯಾಂಕ್, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಆಕ್ಸಿಸ್ ಬ್ಯಾಂಕ್ ನಷ್ಟ ಅನುಭವಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

SCROLL FOR NEXT