ಸಾಂದರ್ಭಿಕ ಚಿತ್ರ 
ವಾಣಿಜ್ಯ

2022-23ನೇ ಸಾಲಿಗೆ ಇಪಿಎಫ್ ಠೇವಣಿಗೆ ಶೇ.8.15 ಬಡ್ಡಿ ದರ ನಿಗದಿಪಡಿಸಲು ಕೇಂದ್ರ ಸರ್ಕಾರದ ಅನುಮೋದನೆ

2022-23ನೇ ಸಾಲಿನ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್‌) ಠೇವಣಿ ಮೇಲೆ ಒದಗಿಸುವ ಬಡ್ಡಿ ದರವನ್ನು ಶೇ. 8.15ಕ್ಕೆ ನಿಗದಿಪಡಿಸಲು ಸರ್ಕಾರ ಅನುಮೋದಿಸಿದೆ.

ನವದೆಹಲಿ: 2022-23ನೇ ಸಾಲಿನ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್‌) ಠೇವಣಿ ಮೇಲೆ ಒದಗಿಸುವ ಬಡ್ಡಿ ದರವನ್ನು ಶೇ. 8.15ಕ್ಕೆ ನಿಗದಿಪಡಿಸಲು ಸರ್ಕಾರ ಅನುಮೋದಿಸಿದೆ. ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಮಾರ್ಚ್ 28,2023ರಂದು 2022-23ರ ಆರ್ಥಿಕ ವರ್ಷದಲ್ಲಿ ತನ್ನ ಆರು ಕೋಟಿ ಚಂದಾದಾರರಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ. 8.15ಕ್ಕೆ ಹೆಚ್ಚಿಸಿತ್ತು. 

ಸೋಮವಾರ ಹೊರಡಿಸಿದ ಸರ್ಕಾರದ ಅಧಿಕೃತ ಆದೇಶದ ಪ್ರಕಾರ, 2022-23ರ ಇಪಿಎಫ್‌ನಲ್ಲಿ ಶೇಕಡಾ 8.15 ರ ಬಡ್ಡಿಯನ್ನು ಸದಸ್ಯರ ಖಾತೆಗಳಿಗೆ ಜಮಾ ಮಾಡಲು ಇಪಿಎಫ್‌ಒ ಕಚೇರಿಗಳಿಗೆ ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಇಪಿಎಫ್‌ಒ ಟ್ರಸ್ಟಿಗಳು ಅನುಮೋದಿಸಿದ ಇಪಿಎಫ್ ಬಡ್ಡಿ ದರಕ್ಕೆ ಹಣಕಾಸು ಸಚಿವಾಲಯ ಒಪ್ಪಿಗೆ ನೀಡಿದ ನಂತರ ಈ ಆದೇಶ ಬಂದಿದೆ.

ಈ ಇಪಿಎಫ್ ಒ ಕ್ಷೇತ್ರ ಕಚೇರಿಗಳು ಚಂದಾದಾರರ ಖಾತೆಗಳಿಗೆ ಜಮೆ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ಮಾರ್ಚ್ 2022 ರಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2021-22 ರ ಇಪಿಎಫ್ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡಾ 8.5 ರಿಂದ ಶೇಕಡಾ 8.10 ಕ್ಕೆ ಇಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ