ಜನೌಷಧ ಕೇಂದ್ರ 
ವಾಣಿಜ್ಯ

2022-23ರಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೂಲಕ ಸಬ್ಸಿಡಿ ಔಷಧಿಗಳ ಮಾರಾಟ 38 ಪ್ರತಿಶತದಷ್ಟು ಏರಿಕೆ!

ಭಾರತದಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳಲ್ಲಿ(ಪಿಎಂಬಿಜೆಕೆ) ಔಷಧಿಗಳ ಮಾರಾಟವು 2022-23ರ ಆರ್ಥಿಕ ವರ್ಷದಲ್ಲಿ 1236.17 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ಶೇ.38ರಷ್ಟು ಏರಿಕೆಯಾಗಿದೆ.

ನವದೆಹಲಿ: ಭಾರತದಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳಲ್ಲಿ(ಪಿಎಂಬಿಜೆಕೆ) ಔಷಧಿಗಳ ಮಾರಾಟವು 2022-23ರ ಆರ್ಥಿಕ ವರ್ಷದಲ್ಲಿ 1236.17 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ಶೇ.38ರಷ್ಟು ಏರಿಕೆಯಾಗಿದೆ. 2021-22 ಹಣಕಾಸು ವರ್ಷದಲ್ಲಿ ಪಿಎಂಬಿಜೆಕೆಯಲ್ಲಿ 893.56 ಕೋಟಿ ರೂಪಾಯಿ ಮಾರಾಟವಾಗಿತ್ತು. 

ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯವು ಒದಗಿಸಿದ ಮಾಹಿತಿಯ ಪ್ರಕಾರ, ಜೂನ್ 30ರವರೆಗೆ ದೇಶಾದ್ಯಂತ 9,512 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. 2024ರ ಮಾರ್ಚ್ ನೊಳಗೆ 10,000 ಜನೌಷಧಗಳನ್ನು ತೆರೆಯುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

1,349 ಜನೌಷಧಿ ಕೇಂದ್ರಗಳನ್ನು ಹೊಂದಿರುವ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ 1,084, ಕೇರಳ 979 ಮತ್ತು ತಮಿಳುನಾಡಿನಲ್ಲಿ 910 ಕೇಂದ್ರಗಳಿವೆ. 2008ರ ನವೆಂಬರ್ ನಲ್ಲಿ ಪ್ರಾರಂಭವಾದ ಈ ಯೋಜನೆಯು 1,759 ಔಷಧಿಗಳನ್ನು ಮತ್ತು 280 ಶಸ್ತ್ರಚಿಕಿತ್ಸಾ ಸಾಧನಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡುತ್ತದೆ.

2023-24ನೇ ಹಣಕಾಸು ವರ್ಷದಲ್ಲಿ ಯೋಜನೆಗೆ 115 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಅದರಲ್ಲಿ ರೂ.28.54 ಕೋಟಿ ಮಂಜೂರು ಮಾಡಲಾಗಿತ್ತು. ಜೂನ್ 30ರವರೆಗೆ ರೂ.17.61 ಕೋಟಿ ಬಳಸಿಕೊಳ್ಳಲಾಗಿದೆ ಎಂದು ಖೂಬಾ ತಿಳಿಸಿದರು.

ಇದಲ್ಲದೆ, NITI ಆಯೋಗದಿಂದ ಈಶಾನ್ಯ ರಾಜ್ಯಗಳು, ಹಿಮಾಲಯ ಪ್ರದೇಶಗಳು, ದ್ವೀಪ ಪ್ರದೇಶಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳು ಎಂದು ನಮೂದಿಸಲಾದ ಅಥವಾ ಮಹಿಳಾ ಉದ್ಯಮಿಗಳು, ಮಾಜಿ ಸೈನಿಕರು, ದಿವ್ಯಾಂಗರು, ಎಸ್ಸಿ ಮತ್ತು ಎಸ್ಟಿಗಳು ತೆರೆಯಲಾದ ಜನೌಷಧಿ ಕೇಂದ್ರಗಳಿಗೆ ಒಂದು ಬಾರಿ 2 ಲಕ್ಷ ರೂ.ಗಳ ಪ್ರೋತ್ಸಾಹವನ್ನು ನೀಡಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT