ನಿವೃತಿ ರೈ 
ವಾಣಿಜ್ಯ

ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರೈ ರಾಜೀನಾಮೆ

ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ ಅವರು 29 ವರ್ಷಗಳ ಸುದೀರ್ಘ ಸೇವೆಯ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ರೈ ಅವರು ಇನ್ವೆಸ್ಟ್ ಇಂಡಿಯಾದ MD ಮತ್ತು CEO ಆಗಿ ನೇಮಕಗೊಳ್ಳಲಿದ್ದಾರೆ.

ನವದೆಹಲಿ: ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ ಅವರು 29 ವರ್ಷಗಳ ಸುದೀರ್ಘ ಸೇವೆಯ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ರೈ ಅವರು ಇನ್ವೆಸ್ಟ್ ಇಂಡಿಯಾದ MD ಮತ್ತು CEO ಆಗಿ ನೇಮಕಗೊಳ್ಳಲಿದ್ದಾರೆ.

1994ರಲ್ಲಿ ವಿನ್ಯಾಸ ಎಂಜಿನಿಯರ್ ಆಗಿ ಇಂಟೆಲ್ ನಲ್ಲಿ ಕೆಲಸ ಆರಂಭಿಸಿದ ನಿವೃತಿ ರೈ ಅವರು ಇತ್ತೀಚಿಗೆ  ಇಂಟೆಲ್ ಫೌಂಡ್ರಿ ಸೇವೆಗಳ ಭಾರತದ ಮುಖ್ಯಸ್ಥರಾಗಿ ಮತ್ತು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

"ನಿವೃತಿ ಅವರ ನಾಯಕತ್ವದಲ್ಲಿ ಇಂಟೆಲ್ ಇಂಡಿಯಾ ಸಾಧಿಸಿದ ಅದ್ಭುತ ಪ್ರಗತಿಗಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ" ಎಂದು ಕಂಪನಿಯು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

1994 ರಲ್ಲಿ ಇಂಟೆಲ್‌ನಲ್ಲಿ ವಿನ್ಯಾಸ ಎಂಜಿನಿಯರ್ ಆಗಿ ಕೆಲಸ ಆರಂಭಿಸಿದ ನಿವೃತಿ ರೈ ಅವರು 29 ವರ್ಷಗಳ ಅವಧಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇಂದು ಕಂಪನಿ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. 

ಮಹಿಳಾ ಸಬಲೀಕರಣಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ 2022ರಲ್ಲಿ ನಿವೃತಿ ರೈ ಅವರಿಗೆ ನಾರಿ ಶಕ್ತಿ ಪುರಸ್ಕಾರವನ್ನು ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ