ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ 350 ರೂ. ಏರಿಕೆ: ಹೊಸ ದರ ಇಂದಿನಿಂದ ಜಾರಿ

ಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಮಾರ್ಚ್ 1 ರಂದು ಅಡುಗೆ ಅನಿಲ ಮತ್ತು ವಾಣಿಜ್ಯ LPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.

ನವದೆಹಲಿ: ಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಮಾರ್ಚ್ 1 ರಂದು ಅಡುಗೆ ಅನಿಲ ಮತ್ತು ವಾಣಿಜ್ಯ LPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.

14.2 ಕೆಜಿ ತೂಕದ ದೇಶೀಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 50 ರೂಪಾಯಿ ಹೆಚ್ಚಳವಾಗುತ್ತದೆ. ರಾಜಧಾನಿ ದೆಹಲಿಯಲ್ಲಿ ಅಡುಗೆಗೆ ಬಳಸುವ ಸಿಲಿಂಡರ್ ಗೆ ಇನ್ನು ಮುಂದೆ ಗ್ರಾಹಕರು 1,103 ರೂಪಾಯಿ ನೀಡಬೇಕು. (Domestic LPG cylinder rate hike)

ಅಲ್ಲದೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 350 ರೂಪಾಯಿ 50 ಪೈಸೆ ಹೆಚ್ಚಿಸಲಾಗಿದೆ, ಈ ಹೆಚ್ಚಳದೊಂದಿಗೆ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ 2,119 ರೂಪಾಯಿ 50 ಪೈಸೆ ಆಗಲಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. 

ದೆಹಲಿಯಲ್ಲಿ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ನ ಹೊಸ ಪರಿಷ್ಕೃತ ಬೆಲೆ ಇಂದಿನಿಂದ ₹ 1053 ರ ಬದಲಿಗೆ ₹ 1103 ಆಗಿರುತ್ತದೆ. ಮುಂಬೈನಲ್ಲಿ, ಈ 1052.50 ರ ಬದಲಿಗೆ ಇನ್ನು ಮುಂದೆ 1,102.5 ಗೆ ಮಾರಾಟ ಮಾಡಲಾಗುತ್ತದೆ. ಕೋಲ್ಕತ್ತಾದಲ್ಲಿ 1,079ರ ಬದಲು 1,129 ಹಾಗೂ ಚೆನ್ನೈನಲ್ಲಿ 1,068.50ರ ಬದಲಿಗೆ 1,118.5ರಷ್ಟು ದುಬಾರಿಯಾಗಿದೆ.

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದೆಹಲಿಯಲ್ಲಿ 1,769 ಬದಲಿಗೆ 2,119.5ಕ್ಕೆ ಲಭ್ಯವಿರುತ್ತದೆ. ಕೋಲ್ಕತ್ತಾದಲ್ಲಿ 1,870 ಇದ್ದದ್ದು ಈಗ 2,221.5 ಆಗಿದೆ.ಮುಂಬೈನಲ್ಲಿ ಇದರ ಬೆಲೆ ಈಗ 1,721 ರಿಂದ 2,071.50ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ 1,917ಕ್ಕೆ ಸಿಗುತ್ತಿದ್ದ ಸಿಲಿಂಡರ್ ಈಗ 2,268ಕ್ಕೆ ದೊರೆಯಲಿದೆ.

ಭಾರತದಲ್ಲಿ LPG ಬೆಲೆಯನ್ನು ಸರ್ಕಾರಿ-ಚಾಲಿತ ತೈಲ ಕಂಪನಿಗಳು ಮಾಸಿಕ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಮತ್ತು ಬದಲಾವಣೆಗೆ ಒಳಪಟ್ಟಿರುತ್ತದೆ.

2014 ರಲ್ಲಿ 19 ಕೆಜಿ ತೂಕದ ಪ್ರತಿ ಸಿಲಿಂಡರ್‌ಗೆ 350 ರೂಪಾಯಿಗಳಷ್ಟು ಹೆಚ್ಚಿಸಿದ ನಂತರ ಇದು ಎರಡನೇ ಅತಿದೊಡ್ಡ ಒಂದೇ ಬಾರಿ ಬೆಲೆ ಏರಿಕೆಯಾಗಿದೆ.  ಜೂನ್ 2022 ರಿಂದ ಮೊದಲ ಬಾರಿಗೆ ವಾಣಿಜ್ಯ LPG ಪ್ರತಿ ಸಿಲಿಂಡರ್ ಬೆಲೆ ಹೆಚ್ಚಳವಾಗುತ್ತಿದೆ. 

ತೂಕದ ಆಧಾರದ ಮೇಲೆ ಪರಿಷ್ಕೃತ ಬೆಲೆಗಳು ಇಲ್ಲಿವೆ:-
19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 1,769 ರಿಂದ 2,119 ಕ್ಕೆ ಶೇಕಡಾ 19.8 ರಷ್ಟು ಏರಿಕೆ

14.2-ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 1,053 ರಿಂದ 1,103 ಕ್ಕೆ ಶೇಕಡಾ 4.7 ರಷ್ಟು ಏರಿಕೆಯಾಗಿದೆ

ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ: ಸ್ಥಳೀಯ ತೆರಿಗೆಗಳಿಂದಾಗಿ ದೇಶೀಯ ಅಡುಗೆ ಅನಿಲದ ಬೆಲೆಗಳು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಬದಲಾಗುತ್ತವೆ. ಇಂಧನ ಚಿಲ್ಲರೆ ವ್ಯಾಪಾರಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ತಿಂಗಳ ಆರಂಭದಲ್ಲಿ ಪರಿಷ್ಕರಿಸುತ್ತಾರೆ.

ಪ್ರತಿ ಕುಟುಂಬವು ಒಂದು ವರ್ಷದಲ್ಲಿ ಸಬ್ಸಿಡಿ ದರದಲ್ಲಿ ತಲಾ 14.2 ಕೆಜಿಯ 12 ಸಿಲಿಂಡರ್‌ಗಳಿಗೆ ಅರ್ಹವಾಗಿರುತ್ತಾರೆ.ಅದರಾಚೆಗೆ ಗ್ರಾಹಕರು LPG ಸಿಲಿಂಡರ್‌ಗಳ ಯಾವುದೇ ಹೆಚ್ಚುವರಿ ಖರೀದಿಗಳನ್ನು ಮಾರುಕಟ್ಟೆ ಬೆಲೆಗೆ ಖರೀದಿಸಬೇಕಾಗುತ್ತದೆ. ಪಹಲ್ (ಎಲ್‌ಪಿಜಿ ನೇರ ಲಾಭ ವರ್ಗಾವಣೆ) ಯೋಜನೆಯಡಿ, ಗ್ರಾಹಕರು ಸಬ್ಸಿಡಿ ದರದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯುತ್ತಾರೆ. ಸಬ್ಸಿಡಿಯು ವಿದೇಶಿ ವಿನಿಮಯ ದರಗಳು, ಕಚ್ಚಾ ತೈಲ ಬೆಲೆಗಳಂತಹ ಹಲವಾರು ಅಂಶಗಳನ್ನು ಅವಲಂಬಿಸಿರುತ್ತದೆ.

ಬೆಂಗಳೂರಿನಲ್ಲಿ ಎಷ್ಟು ದರ: ಬೆಂಗಳೂರಿನಲ್ಲಿ ಎಲ್‌ಪಿಜಿ ಬೆಲೆ ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ. ಇವುಗಳು ಹೆಚ್ಚಾದಾಗ, ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ದರಗಳು ಹೆಚ್ಚಾಗುತ್ತವೆ. ಬಡ ವರ್ಗಗಳಿಗೆ, ಸರ್ಕಾರವು ಈ ಬೆಲೆಗಳನ್ನು ಸಬ್ಸಿಡಿ ಮಾಡಿದೆ. ಬೆಂಗಳೂರಿನಲ್ಲಿ ಇಂದು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 1,105 ರೂಪಾಯಿ 50 ಪೈಸೆಯಾಗಿದೆ. ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಸರಿಸುಮಾರು ಇದೇ ದರ ಅನ್ವಯವಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT