ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಮೇ 23ರಂದು ಆರಂಭ; ಹೇಗೆ ಇಲ್ಲಿದೆ ವಿವರ...

ಭಾರತೀಯ ರಿಸರ್ವ್ ಬ್ಯಾಂಕ್ ನಿನ್ನೆ ಶುಕ್ರವಾರ 2,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಘೋಷಿಸಿದೆ. ಈಗಾಗಲೇ ಚಲಾವಣೆಯಲ್ಲಿರುವ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಕೂಡ ತಿಳಿಸಿದೆ.

2 ಸಾವಿರ ಮುಖಬೆಲೆಯ ನೋಟುಗಳು
Sumana Upadhyaya
Updated On : 20 May 2023, 1:40 pm

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿನ್ನೆ ಶುಕ್ರವಾರ 2,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಘೋಷಿಸಿದೆ. ಈಗಾಗಲೇ ಚಲಾವಣೆಯಲ್ಲಿರುವ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಕೂಡ ತಿಳಿಸಿದೆ. 

ಆದರೆ 2,000 ಮುಖಬೆಲೆಯ ಬ್ಯಾಂಕ್ ನೋಟುಗಳು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಕಾರ್ಯಾಚರಣೆಯ ಅನುಕೂಲತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬ್ಯಾಂಕ್ ಶಾಖೆಗಳ ನಿಯಮಿತ ಚಟುವಟಿಕೆಗಳಿಗೆ ಅಡ್ಡಿಯಾಗುವುದನ್ನು ತಪ್ಪಿಸಲು, ಆರ್‌ಬಿಐ 2,000 ರೂಪಾಯಿ ಮುಖಬೆಲೆಯ ಬ್ಯಾಂಕ್ ನೋಟುಗಳನ್ನು ಇತರ ಮುಖಬೆಲೆಯ ಬ್ಯಾಂಕ್ ನೋಟುಗಳಾಗಿ ವಿನಿಮಯ ಮಾಡಿಕೊಳ್ಳುವುದನ್ನು ಇದೇ ಮೇ 23ರಿಂದ ಆರಂಭಿಸಲಿದೆ. 

Advertisement

Advertisement

ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ. ಮೇ 23 ರಿಂದ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ (ಆರ್‌ಒ) 2,000 ರೂಪಾಯಿಗಳ ಬ್ಯಾಂಕ್ ನೋಟುಗಳನ್ನು 20,000 ರೂಪಾಯಿಗಳ ಮಿತಿಯವರೆಗೆ ವಿನಿಮಯ ಮಾಡಿಕೊಳ್ಳುವ ಸೌಲಭ್ಯವನ್ನು ಮೇ 23 ರಿಂದ ಒದಗಿಸಲಾಗುವುದು.

ಇದನ್ನೂ ಓದಿ: 2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

2,000 ಮುಖಬೆಲೆಯ ಬ್ಯಾಂಕ್ ನೋಟನ್ನು ನವೆಂಬರ್ 2016 ರಲ್ಲಿ ಪರಿಚಯಿಸಲಾಗಿತ್ತು. 

ಮುಖ್ಯಾಂಶಗಳು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement