ಇನ್ಫೋಸಿಸ್ 
ವಾಣಿಜ್ಯ

ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ಕಡ್ಡಾಯಗೊಳಿಸಿದ ಇನ್ಫೋಸಿಸ್!

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವಾರದಲ್ಲಿ ಎಲ್ಲಾ ಐದು ದಿನ ಕಚೇರಿಯಿಂದ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ ನಂತರ, ದೇಶದ ಎರಡನೇ ಅತಿದೊಡ್ಡ ಐಟಿ ಕಂಪನಿ ಇನ್ಫೋಸಿಸ್, ಕೆಳ ಹಂತದಿಂದ ಮಧ್ಯಮ...

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವಾರದಲ್ಲಿ ಎಲ್ಲಾ ಐದು ದಿನ ಕಚೇರಿಯಿಂದ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ ನಂತರ, ದೇಶದ ಎರಡನೇ ಅತಿದೊಡ್ಡ ಐಟಿ ಕಂಪನಿ ಇನ್ಫೋಸಿಸ್, ಕೆಳ ಹಂತದಿಂದ ಮಧ್ಯಮ ಹಂತದ ಉದ್ಯೋಗಿಗಳಿಗೆ ವಾರದಲ್ಲಿ ಮೂರು ದಿನ ಕಚೇರಿಯಿಂದಲೇ ಕೆಲಸ ಕಡ್ಡಾಯಗೊಳಿಸಿದೆ. ಇನ್ಫೋಸಿಸ್ ಈ ಆದೇಶ ನವೆಂಬರ್ 20 ರಿಂದ ಜಾರಿಗೆ ಬರಲಿದೆ.

ಮಾರ್ಚ್ 2020 ರಿಂದ, ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ ಮತ್ತು ಕಳೆದ ವರ್ಷ ಏಪ್ರಿಲ್‌ನಲ್ಲಿ ಕಂಪನಿಯು ಹೈಬ್ರಿಡ್ ಮಾದರಿಯನ್ನು ಅಳವಡಿಸಿಕೊಂಡಿತು.

"ಹೈಬ್ರಿಡ್ ಮಾದರಿಯಲ್ಲಿಯೇ ನಮ್ಮ ಕಾರ್ಯಪಡೆಯನ್ನು  ಬಲಪಡಿಸಲು ಎಲ್ಲಾ ಉದ್ಯೋಗಿಗಳು ನವೆಂಬರ್ 20, 2023 ರಿಂದ ವಾರಕ್ಕೆ ಮೂರು ದಿನಗಳ ಕಾಲ ಆಯಾ ಕಚೇರಿಗಳಿಂದ ಕೆಲಸ ಮಾಡಬೇಕಾಗುತ್ತದೆ. ಒಂದು ವೇಳೆ ಅವರು ಮೂಲ ಕಚೇರಿಯಲ್ಲಿ ಇಲ್ಲದಿದ್ದರೆ, ಡಿಸೆಂಬರ್ 4, 2023 ರಿಂದ ಜಾರಿಗೆ ಬರುವಂತೆ ಮೂಲ ಸ್ಥಳದಿಂದ ಕೆಲಸ ಮಾಡಲು ಪ್ರಾರಂಭಿಸಬಹುದು ಎಂದು ಇನ್ಫೋಸಿಸ್ ತಿಳಿಸಿದೆ.

"ಜನ ರಿಮೋಟ್ ಆಗಿ ಕೆಲಸ ಮಾಡಲು ಬಯಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಜನ ಏನನ್ನು ಯೋಚಿಸುತ್ತಾರೆ ಮತ್ತು ಏನನ್ನು ಬಯಸುತ್ತಾರೆ ಎಂಬುದರ ನಡುವೆ ಸಂಪರ್ಕ ಕಡಿತವಾಗಿದೆ ಎಂದು ಬಿಜ್ ಸ್ಟಾಫಿಂಗ್ ಕಾಮ್ರೇಡ್‌ನ ವ್ಯವಸ್ಥಾಪಕ ಪಾಲುದಾರ ಪುನೀತ್ ಅರೋರಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ