ಏರ್ ಇಂಡಿಯಾ ವಿಮಾನ 
ವಾಣಿಜ್ಯ

ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್ 30 ರವರೆಗೆ ಟೆಲ್ ಅವಿವ್ ಗೆ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ

ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಮುಂದುವರೆದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ನಿಗದಿತ ವಿಮಾನಗಳನ್ನು ರದ್ದುಗೊಳಿಸಿದೆ.

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಮುಂದುವರೆದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ನಿಗದಿತ ವಿಮಾನಗಳನ್ನು ರದ್ದುಗೊಳಿಸಿದೆ.

ಅಕ್ಟೋಬರ್ 7 ರಿಂದ ಟೆಲ್ ಅವಿವ್‌ಗೆ ತೆರಳುವ ಮತ್ತು ಟೆಲ್ ಅವೀವ್‌ನಿಂದ ದೆಹಲಿಗೆ ಹಿಂದಿರುಗುವ ವಿಮಾನವನ್ನು ರದ್ದುಗೊಳಿಸಲಾಗಿದೆ.

ಇದೀಗ ನವೆಂಬರ್ 30 ರವರೆಗೆ ಟೆಲ್ ಅವಿವ್​​ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಸಾಮಾನ್ಯವಾಗಿ ಏರ್ ಇಂಡಿಯಾ ವಿಮಾನಗಳು ವಾರದಲ್ಲಿ ಐದು ದಿನ ರಾಷ್ಟ್ರ ರಾಜಧಾನಿಯಿಂದ ಟೆಲ್ ಅವಿವ್ ಗೆ ಕಾರ್ಯಾಚರಣೆ ನಡೆಸುತ್ತವೆ. ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಇರುತಿತ್ತು.

ಕಳೆದ ತಿಂಗಳು ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಆರಂಭವಾದ ನಂತರ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಅಡಿಯಲ್ಲಿ ಕೆಲವು ಚಾರ್ಟರ್ಡ್ ವಿಮಾನಗಳು ಕಾರ್ಯ ನಿರ್ವಹಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ