ವಾಣಿಜ್ಯ

ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂಪಾಯಿ ದಂಡ!

Lingaraj Badiger

ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ಪ್ರಯಾಣಿಕರ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟಾಟಾ ಒಡೆತನದ ಏರ್ ಇಂಡಿಯಾಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಈ ಸಂಬಂಧ ಡಿಜಿಸಿಎ, ಏರ್ ಇಂಡಿಯಾಗೆ  'ಶೋ-ಕಾಸ್' ನೋಟಿಸ್ ಸಹ ಜಾರಿಗೊಳಿಸಿದ್ದು, ನಾಗರಿಕ ವಿಮಾನಯಾನ ಅಗತ್ಯತೆಗಳ(ಸಿಎಆರ್) ನಿಬಂಧನೆಗಳನ್ನು ಅನುಸರಿಸದಿರುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಪ್ರಯಾಣಿಕರ-ಕೇಂದ್ರಿತ CARS ನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, ಮೇ 2023 ರಿಂದ ನಿರಂತರವಾಗಿವಿವಿಧ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ನಿಗದಿತ ದೇಶೀಯ ವಿಮಾನಯಾನ ಸಂಸ್ಥೆಗಳ ತಪಾಸಣೆ ನಡೆಸಲಾಗಿದೆ. ತಪಾಸಣೆಯ ಸಮಯದಲ್ಲಿ, ಏರ್ ಇಂಡಿಯಾ ಸಿಎಆರ್‌ನ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಎಆರ್‌ನ ನಿಬಂಧನೆಗಳಿಗೆ ಅನುಸಾರವಾಗಿ ಪ್ರತಿಕ್ರಿಯಿಸುವಂತೆ ಡಿಜಿಸಿಎಂ, ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿದೆ.

SCROLL FOR NEXT