ಸಾಂದರ್ಭಿಕ ಚಿತ್ರ 
ವಾಣಿಜ್ಯ

ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.36 ಲಕ್ಷ ಕೋಟಿ ಜಿಎಸ್ ಟಿ ವಂಚನೆ: ಹಣಕಾಸು ಇಲಾಖೆ ಮಾಹಿತಿ

2023-24ರ ಆರ್ಥಿಕ ವರ್ಷದಲ್ಲಿ ಸುಮಾರು 1.36 ಲಕ್ಷ ಕೋಟಿ ರೂಪಾಯಿ ತೆರಿಗೆ ವಂಚನೆಯನ್ನು ಆರ್ಥಿಕ ಇಲಾಖೆ ಪತ್ತೆ ಮಾಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂಚನೆ ಪತ್ತೆಯಾದ ಬಳಿಕ ಸ್ವಯಂ ಪ್ರೇರಿತವಾಗಿ 14,108 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿ: 2023-24ರ ಆರ್ಥಿಕ ವರ್ಷದಲ್ಲಿ ಸುಮಾರು 1.36 ಲಕ್ಷ ಕೋಟಿ ರೂಪಾಯಿ ತೆರಿಗೆ ವಂಚನೆಯನ್ನು ಆರ್ಥಿಕ ಇಲಾಖೆ ಪತ್ತೆ ಮಾಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂಚನೆ ಪತ್ತೆಯಾದ ಬಳಿಕ ಸ್ವಯಂ ಪ್ರೇರಿತವಾಗಿ 14,108 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.

ಏಪ್ರಿಲ್ 2020 ರಿಂದ ಸೆಪ್ಟೆಂಬರ್ 2023 ರವರೆಗೆ 57,000 ಕೋಟಿ ರು. ಜಿಎಸ್ ಟಿ ವಂಚನೆಯಾಗಿದ್ದು, ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶಕರು ಇದುವರೆಗೆ 6,000 ಕ್ಕೂ ಹೆಚ್ಚು ನಕಲಿ ಐಟಿಸಿ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

ಹಣಕಾಸು ಸಚಿವಾಲಯದ ಪ್ರಕಾರ, ಜೂನ್ 2023 ರಿಂದ ಡಿಜಿಜಿಐ ಮಾಸ್ಟರ್‌ಮೈಂಡ್‌ಗಳನ್ನು ಗುರುತಿಸಲು ಮತ್ತು ಬಂಧಿಸುವತ್ತ ಕಾರ್ಯನಿರ್ವಹಿಸುತ್ತವೆ. ದೇಶಾದ್ಯಂತ ಇಂತ ಸಿಂಡಿಕೇಟ್ ಗಳು ವ್ಯಾಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಇಲಾಖೆಯು ಸುಧಾರಿತ ತಾಂತ್ರಿಕ ಪರಿಕರಗಳ ಸಹಾಯದಿಂದ ದತ್ತಾಂಶ ವಿಶ್ಲೇಷಣೆಯನ್ನು ಬಳಸುತ್ತಿದ್ದು, ಬೃಹತ್ ಪ್ರಮಾಣದ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚುತ್ತಿದೆ ಎಂದು ತಿಳಿಸಿದೆ.

ಈ  ಸಿಂಡಿಕೇಟ್‌ಗಳು ಸಾಮಾನ್ಯವಾಗಿ ತೆರಿಗೆ ವಂಚಕರನ್ನು ಬಳಸಿಕೊಳ್ಳುತ್ತವೆ. ಅವರಿಗೆ ಕಮಿಷನ್‌ಗಳು, ಬ್ಯಾಂಕ್ ಸಾಲ ಸೇರಿದಂತೆ ಹಲವು ರೀತಿಯಲ್ಲಿ ಆಮೀಷ ಒಡ್ಡುತ್ತಾರೆ. ನಂತರ ಅವರ ಕೆವೈಸಿ ದಾಖಲೆಗಳನ್ನು ಅವರ ಗಮನಕ್ಕೆ ಬಾರದಂತೆ ಬಳಸಿಕೊಂಡು ನಕಲಿ ಕಂಪನಿಗಳನ್ನು ಸೃಷ್ಟಿಸುತ್ತಾರೆ.

ಇನ್ನೂ ಕೆಲವು ಸಂದರ್ಭಗಳಲ್ಲಿ, KYC ಗಳನ್ನು ಸಂಬಂಧಿತ ವ್ಯಕ್ತಿಯ ಗಮನಕ್ಕೆ ತಂದು ಅವರಿಗೆ ಸಣ್ಣ ಹಣ ಪಾವತಿಸುವ ಮೂಲಕ ಬಳಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT