ಎಂಎಸ್ ಧೋನಿ 
ವಾಣಿಜ್ಯ

ಎಸ್‌ಬಿಐ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ನೇಮಕ!

ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಿಸಿಕೊಂಡಿರುವುದಾಗಿ ಭಾನುವಾರ ತಿಳಿಸಿದೆ.

ಮುಂಬೈ: ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಿಸಿಕೊಂಡಿರುವುದಾಗಿ ಭಾನುವಾರ ತಿಳಿಸಿದೆ. ಎಸ್‌ಬಿಐನ ಬ್ರಾಂಡ್ ಅಂಬಾಸಿಡರ್ ಆಗಿ ಧೋನಿ ವಿವಿಧ ಮಾರ್ಕೆಟಿಂಗ್ ಮತ್ತು ಪ್ರಚಾರ ಅಭಿಯಾನಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಬ್ಯಾಂಕ್ ಹೇಳಿದೆ. 

ಒತ್ತಡದ ಸಂದರ್ಭಗಳಲ್ಲಿ ನಿಯಂತ್ರಣ ಕಾಯ್ದುಕೊಳ್ಳುವ, ಸ್ಪಷ್ಟ ಆಲೋಚನೆ ಮತ್ತು ತ್ವರಿತ ನಿರ್ಧಾರ ಕೈಗೊಳ್ಳುವ ಅವರ ಸಾಮರ್ಥ್ಯ ದೇಶಾದ್ಯಂತ ತನ್ನ ಗ್ರಾಹಕರು ಮತ್ತು ಪಾಲುದಾರರೊಂದಿಗೆ ಸಂಪರ್ಕ ಸಾಧಿಸಲು ಸೂಕ್ತ ಆಯ್ಕೆಯಾಗಿದೆ. ಇದು ವಿಶ್ವಾಸಾರ್ಹತೆ ಮತ್ತು ನಾಯಕತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುವ, ತನ್ನ ಗ್ರಾಹಕರೊಂದಿಗೆ ಆಳವಾದ ಸಂಪರ್ಕಗಳನ್ನು ಬೆಸೆಯುವ ಬ್ಯಾಂಕಿನ ಬದ್ಧತೆಯ ಸಂಕೇತವಾಗಿದೆ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ. 

ಒಬ್ಬ ಸಂತೃಪ್ತ ಗ್ರಾಹಕರಾಗಿ ಎಸ್‌ಬಿಐ ಜೊತೆಗಿನ ಒಡನಾಟ ಅವರನ್ನು ನಮ್ಮ ಬ್ರ್ಯಾಂಡ್‌ನ  ಪರಿಪೂರ್ಣ ಆದರ್ಶವನ್ನು ಪರಿಪೂರ್ಣ ಸಾಕಾರಗೊಳಿಸಿದೆ. ಈ ಪಾಲುದಾರಿಕೆಯೊಂದಿಗೆ, ದೇಶ ಮತ್ತು ನಮ್ಮ ಗ್ರಾಹಕರಿಗೆ ನಂಬಿಕೆ, ಸಮಗ್ರತೆ ಮತ್ತು ಅಚಲವಾದ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸುವ ನಮ್ಮ ಬದ್ಧತೆಯನ್ನು ಬಲಪಡಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್