ಟೆರಾಡೈನ್ ಗೆ ಸಚಿವ ಎಂಬಿ ಪಾಟೀಲ್ ಭೇಟಿ 
ವಾಣಿಜ್ಯ

ಬೆಂಗಳೂರಿನಲ್ಲಿ `ವಾಟರ್ಸ್’ನಿಂದ 16 ಮಿಲಿಯನ್ ಡಾಲರ್ ಹೂಡಿಕೆ, ಕೇಪಬಿಲಿಟಿ ಸೆಂಟರ್ ಸ್ಥಾಪನೆ

ಆರೋಗ್ಯ ಮತ್ತು ಔಷಧ ತಯಾರಿಕೆ ಕ್ಷೇತ್ರದ ದೈತ್ಯ ಕಂಪನಿ ‘ವಾಟರ್ಸ್’ ಬೆಂಗಳೂರಿನ ಆರ್.ಎಂ.ಜೆಡ್ ಇಕೋವರ್ಲ್ಡ್ ಸಂಕೀರ್ಣದಲ್ಲಿ 16 ಮಿಲಿಯನ್ ಡಾಲರ್ ವೆಚ್ಚದಲ್ಲಿ ಕೇಪಬಿಲಿಟಿ ಸೆಂಟರ್ ಸ್ಥಾಪಿಸಲು ಒಪ್ಪಿಕೊಂಡಿದೆ. ಗುರುವಾರ ಆ ಕಂಪನಿಯ...

ಬೋಸ್ಟನ್: ಆರೋಗ್ಯ ಮತ್ತು ಔಷಧ ತಯಾರಿಕೆ ಕ್ಷೇತ್ರದ ದೈತ್ಯ ಕಂಪನಿ ‘ವಾಟರ್ಸ್’ ಬೆಂಗಳೂರಿನ ಆರ್.ಎಂ.ಜೆಡ್ ಇಕೋವರ್ಲ್ಡ್ ಸಂಕೀರ್ಣದಲ್ಲಿ 16 ಮಿಲಿಯನ್ ಡಾಲರ್ ವೆಚ್ಚದಲ್ಲಿ ಕೇಪಬಿಲಿಟಿ ಸೆಂಟರ್ ಸ್ಥಾಪಿಸಲು ಒಪ್ಪಿಕೊಂಡಿದೆ. ಗುರುವಾರ ಆ ಕಂಪನಿಯ ಉನ್ನತಾಧಿಕಾರಿಗಳೊಂದಿಗೆ ಸಹಭಾಗಿತ್ವ ಉಪಕ್ರಮ ಕುರಿತು ನಡೆಸಿದ ಚರ್ಚೆಯ ಫಲವಿದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, `ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ನಿರೀಕ್ಷಿತ ವೇಗವನ್ನು ಕೊಡಬೇಕಾದ ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದೇವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು, ಉತ್ಕೃಷ್ಟ ಗುಣಮಟ್ಟದ ಔಷಧಗಳು ನಮ್ಮಲ್ಲೇ ತಯಾರಾಗುವಂತಹ ವಾತಾವರಣ ನಿರ್ಮಿಸಬೇಕಾಗಿದೆ. ಕರ್ನಾಟಕದಲ್ಲಿ ಸಕ್ರಿಯವಾಗಿರುವ ಔಷಧ ತಯಾರಿಕೆ ಕಂಪನಿಗಳೊಂದಿಗೆ ವಾಟರ್ಸ್ ಕಂಪನಿಯ ಸಹಭಾಗಿತ್ವ ಸ್ಥಾಪನೆ ಅತ್ಯಗತ್ಯವಾಗಿದ್ದು, ಔಷಧೋತ್ಪನ್ನಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಕಂಪನಿಯು ಸರ್ಕಾರ ಮತ್ತು ಕಾಲೇಜುಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ಪರಿಣಿತ ಸಿಬ್ಬಂದಿಯನ್ನು ಸಜ್ಜುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ’  ಎಂದಿದ್ದಾರೆ.

16 ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತ, 8 ಸಾವಿರ ಉದ್ಯೋಗಿಗಳನ್ನು ಹೊಂದಿರುವ ವಾಟರ್ಸ್ ಕಂಪನಿಯು ಕ್ರೊಮ್ಯಾಟೋಗ್ರಫಿ, ಮಾಸ್ ಸ್ಪೆಕ್ಟ್ರೋಮೆಟ್ರಿ, ಥರ್ಮಲ್ ಅನಾಲಿಸಿಸ್ ಅನ್ವೇಷಣೆಗಳ ಮೂಲಕ ಮನುಷ್ಯರ ಆರೋಗ್ಯ ವೃದ್ಧಿ ಮತ್ತು ಕ್ಷೇಮಪಾಲನೆ ಕ್ಷೇತ್ರಗಳಲ್ಲಿ ಗಮನಾರ್ಹ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಈಗ ಬಯೋಸಿಮಿಲರ್ ಗಳ ಪರೀಕ್ಷಾರ್ಥ ಬಳಕೆ ಮೇಲೆ ಬಿಗಿಯಾದ ನಿಯಮಗಳಿವೆ. ಇವುಗಳನ್ನು ಸಡಿಲಿಸಬೇಕಾದ ಅಗತ್ಯದ ಬಗ್ಗೆ ಕಂಪನಿಯ ಪ್ರತಿನಿಧಿಗಳು ಚರ್ಚಿಸಿದರು ಎಂದು ಅವರು ವಿವರಿಸಿದ್ದಾರೆ.

ಸಚಿವರ ನೇತೃತ್ವದ ನಿಯೋಗವು ಇದೇ ಸಂದರ್ಭದಲ್ಲಿ ವಾಟರ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೂ ಭೇಟಿ ನೀಡಿದ್ದು, ಅಲ್ಲಿನ ವ್ಯವಸ್ಥೆಯನ್ನು ವೀಕ್ಷಿಸಿದೆ.

ಮಾತುಕತೆಯಲ್ಲಿ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಉದಿತ್ ಬಾತ್ರಾ, ಸಿಎಫ್ಒ ಅನ್ಮೋಲ್ ಚೌಬಾಲ್, ಸಿಐಒ ಬ್ರೂಕ್ ಕೊಲ್ಯಾಂಜೆಲೋ ಮತ್ತು ಉಪಾಧ್ಯಕ್ಷ ಕ್ರಿಸ್ಟಿನ್ ಗಾರ್ವಿ ಉಪಸ್ಥಿತರಿದ್ದರು. ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

ಟೆರಾಡೈನ್ ಜತೆಗೂ ಮಾತುಕತೆ
ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಟೆರಾಡೈನ್ ಕಂಪನಿಯೊಂದಿಗೂ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕೆ ಸಂಬಂಧ ವಿಚಾರ ವಿನಿಮಯ ನಡೆಸಲಾಗಿದೆ ಎಂದು ಸಚಿವ ಪಾಟೀಲ್ ಅವರು ತಿಳಿಸಿದ್ದಾರೆ.

ವರ್ಷಕ್ಕೆ 15 ಬಿಲಿಯನ್ ಡಾಲರ್ ವಹಿವಾಟು ನಡೆಸುವ ಟೆರಾಡೈನ್ ಕಂಪನಿಯು ರೋಬೋಟಿಕ್ಸ್ ತಂತ್ರಜ್ಞಾನದ ಮೂಲಕ ಆಟೋಮೇಷನ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಸಚಿವರ ನೇತೃತ್ವದ ನಿಯೋಗವು, ಟೆರಾಡೈನ್ ಉತ್ಪಾದನಾ ಘಟಕಕ್ಕೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ನೋಡಿ ಮೆಚ್ವುಗೆ ವ್ಯಕ್ತಪಡಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT