ತೈಲ ಬೆಲೆ ಏರಿಕೆ (ಸಾಂಕೇತಿಕ ಚಿತ್ರ) online desk
ವಾಣಿಜ್ಯ

ತೈಲ ಬೆಲೆ 6 ತಿಂಗಳಲ್ಲೇ ಅತ್ಯಧಿಕ ಏರಿಕೆ: ಜಾಗತಿಕ ಹಣದುಬ್ಬರ ಹೆಚ್ಚಳದ ಭೀತಿ!

ಬ್ರೆಂಟ್ ಕಚ್ಚಾ ತೈಲದ ಬೆಲೆ 6 ತಿಂಗಳಲ್ಲೇ ಅತ್ಯಧಿಕ ಹೆಚ್ಚಳವಾಗಿದ್ದು, ಪ್ರತಿ ಬ್ಯಾರೆಲ್ ಗೆ 91 ಡಾಲರ್ ಗೆ ತಲುಪಿದೆ.

ನವದೆಹಲಿ: ಬ್ರೆಂಟ್ ಕಚ್ಚಾ ತೈಲದ ಬೆಲೆ 6 ತಿಂಗಳಲ್ಲೇ ಅತ್ಯಧಿಕ ಹೆಚ್ಚಳವಾಗಿದ್ದು, ಪ್ರತಿ ಬ್ಯಾರೆಲ್ ಗೆ 91 ಡಾಲರ್ ಗೆ ತಲುಪಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದ ಬೆನ್ನಲ್ಲೇ ತೈಲ ಬೆಲೆಗಳಲ್ಲಿನ ಈ ಹಠಾತ್ ಮತ್ತು ಗಮನಾರ್ಹ ಏರಿಕೆ ಜಾಗತಿಕ ಹಣಕಾಸು ಮಾರುಕಟ್ಟೆಗಳಾದ್ಯಂತ ಪರಿಣಾಮ ಉಂಟುಮಾಡಿದೆ. ಹಣದುಬ್ಬರ ಏರಿಕೆ ಟ್ರೆಂಡ್ ಸೆಂಟ್ರಲ್ ಬ್ಯಾಂಕ್ ಗಳಲ್ಲಿ ಹಾಗೂ ಹೂಡಿಕೆದಾರಲ್ಲಿ ಆತಂಕ ಮೂಡಿಸಿದೆ.

ಜಾಗತಿಕ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲ, ಅಕ್ಟೋಬರ್‌ನಿಂದ ಈ ಮಟ್ಟವನ್ನು ತಲುಪಿರಲಿಲ್ಲ. ಹಮಾಸ್ ಹಾಗೂ ಇಸ್ರೇಲ್ ನಡುವಿನ ಇತ್ತೀಚಿನ ಸಂಘರ್ಷ ತೈಲ ಏರಿಕೆಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಹೆಚ್ಚುತ್ತಿರುವ ತೈಲ ಬೆಲೆಗಳ ಪರಿಣಾಮಗಳು ಭೌಗೋಳಿಕ ರಾಜಕೀಯ ಆತಂಕಗಳನ್ನು ಮೀರಿ ವಿಸ್ತರಿಸುತ್ತವೆ. ಜಾಗತಿಕ ಆರ್ಥಿಕತೆಯ ವಿವಿಧ ಕ್ಷೇತ್ರಗಳ ಮೇಲೆ ಇದರ ಕರಿ ನೆರಳು ಆವರಿಸಿದೆ.

COVID-19 ಸಾಂಕ್ರಾಮಿಕದ ಪ್ರಭಾವದಿಂದ ಆರ್ಥಿಕತೆಯು ಇನ್ನೂ ಚೇತರಿಸಿಕೊಳ್ಳುತ್ತಿರುವ ಅಮೇರಿಕಾದಲ್ಲಿ ಗ್ಯಾಸೋಲಿನ್ ಬೆಲೆಗಳಲ್ಲಿನ ಹಠಾತ್ ಏರಿಕೆಯು ಕಳವಳವನ್ನು ಮತ್ತಷ್ಟು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT