ಥಿಯೆರಿ ಡೆಲಾಪೋರ್ಟೆ 
ವಾಣಿಜ್ಯ

ವಿಪ್ರೋ ಸಿಇಒ ಡೆಲಾಪೋರ್ಟೆ ರಾಜೀನಾಮೆ; ನೂತನ ಮುಖ್ಯಸ್ಥರಾಗಿ ಶ್ರೀನಿವಾಸ್ ಪಲ್ಲಿಯಾ ನೇಮಕ

ಭಾರತದ ಪ್ರಮುಖ ಐಟಿ ಕಂಪನಿ ವಿಪ್ರೋ ಸಿಇಒ ಥಿಯೆರಿ ಡೆಲಾಪೋರ್ಟೆ ಅವರು ಶನಿವಾರ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಭಾರತದ ಪ್ರಮುಖ ಐಟಿ ಕಂಪನಿ ವಿಪ್ರೋ ಸಿಇಒ ಥಿಯೆರಿ ಡೆಲಾಪೋರ್ಟೆ ಅವರು ಶನಿವಾರ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶ್ರೀನಿವಾಸ್ ಪಲ್ಲಿಯಾ ಅವರನ್ನು ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ತಕ್ಷಣವೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಥಿಯೆರ್ರಿ ಡೆಲಾಪೋರ್ಟೆ ಅವರು ರಾಜೀನಾಮೆ ನೀಡಿದ್ದಾರೆ. 2024ರ ಮೇ 31ರಂದು ಅವರನ್ನು ಕಂಪೆನಿಯ ಉದ್ಯೋಗದಿಂದ ಮುಕ್ತಗೊಳಿಸಲಾಗುವುದು ಎಂದು ವಿಪ್ರೋ ಅಧ್ಯಕ್ಷ ರಿಷದ್ ಪ್ರೇಮ್ ಜಿ ಅವರು ತಿಳಿಸಿದ್ದಾರೆ.

ನಿರ್ದೇಶಕರ ಮಂಡಳಿಯು ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಶ್ರೀನಿವಾಸ್ ಪಲ್ಲಿಯಾ ಅವರನ್ನು ನೇಮಿಸಲು ಅನುಮೋದಿಸಿದೆ ಎಂದು ವಿಪ್ರೋ ಹೇಳಿದೆ.

56 ವರ್ಷದ ಡೆಲಾಪೋರ್ಟೆ ಅವರನ್ನು 2020ರ ಜುಲೈಯಲ್ಲಿ ಕಂಪೆನಿಯ ಸಿಇಒ ಮತ್ತು ಎಂಡಿ ಆಗಿ ನೇಮಿಸಲಾಗಿತ್ತು. ಇದಕ್ಕೂ ಮೊದಲು, ಫ್ರೆಂಚ್ ಮೂಲದ ಟೆಕ್ ಬಾಸ್ ಕ್ಯಾಪ್ಜೆಮಿನಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಆಗಿ ಕರ್ತವ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT