ಚಿನ್ನದ ದರದಲ್ಲಿ ಏರಿಕೆ 
ವಾಣಿಜ್ಯ

Gold Rate: ಚಿನ್ನದ ದರ ಮತ್ತೆ ಏರಿಕೆ; ಇಂದಿನ ಬೆಲೆ ಇಂತಿದೆ!

ಯುಗಾದಿ ಹಬ್ಬಕ್ಕೆ ಸಿದ್ಧತೆ ನಡೆಸಿರುವಂತೆಯೇ ಅತ್ತ ಚಿನಿವಾರ ಪೇಟೆಯಲ್ಲಿ ಸದ್ದೇ ಇಲ್ಲದೇ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

ಮುಂಬೈ: ಯುಗಾದಿ ಹಬ್ಬಕ್ಕೆ ಸಿದ್ಧತೆ ನಡೆಸಿರುವಂತೆಯೇ ಅತ್ತ ಚಿನಿವಾರ ಪೇಟೆಯಲ್ಲಿ ಸದ್ದೇ ಇಲ್ಲದೇ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

ಹೌದು.. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸೋಮವಾರ ಮತ್ತಷ್ಟು ಏರಿಕೆ ಕಂಡಿದ್ದು, ಕಳೆದ ಶನಿವಾರ ಏರಿಕೆ ಕಂಡಿದ್ದ ಹಳದಿ ಲೋಹದ ದರ ಇಂದು ಮತ್ತೆ ಏರಿಕೆ ಕಂಡಿದೆ. 22 ಕ್ಯಾರಟ್‌ ಚಿನ್ನದ ದರದಲ್ಲಿ 30 ರೂ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 33 ರೂ ಏರಿಕೆಯಾಗಿದೆ.

ಉದ್ಯಾನನಗರಿ ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನ 6,565 ರೂ ಇದ್ದು, ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ 7,162 ರೂ ಆಗಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿಯೂ ಚಿನ್ನದ ಬೆಲೆ ಏರಿಕೆಯಾಗುವ ಅಂದಾಜಿತ್ತು. ಅದರಂತೆ ಹಬ್ಬದ ಹಿಂದಿನ ದಿನವೇ ಚಿನ್ನದ ದರ ಏರಿಕೆಯಾಗಿದೆ.

ಈ ಹಿಂದೆ ಮಾರ್ಚ್ 30 ರಂದು 22 ಕ್ಯಾರೆಟ್ ಚಿನ್ನದ ದರ 6,290 ರೂ ಮತ್ತು 24 ಕ್ಯಾರೆಟ್ ಚಿನ್ನದ ದರ 6,860 ರೂ ಗಳಷ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ;1 ,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!