ನವದೆಹಲಿ: ಆಗಸ್ಟ್ ತಿಂಗಳಿಗೆ ಕಾಲಿಟ್ಟ ಕೂಡಲೇ ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪೆನಿಗಳು(OMCs) ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಆಗಸ್ಟ್ 1 ರಿಂದ ದುಬಾರಿಯಾಗಿದೆ. ಗೃಹ ಬಳಕೆಗೆ ಬಳಸುವ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನಿಂದ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 8 ರೂಪಾಯಿ 50 ಪೈಸೆ ಹೆಚ್ಚಳವಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವೆಬ್‌ಸೈಟ್ ಪ್ರಕಾರ, ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ ರೂ 1,652.50 ಆಗಿದೆ, 1,646 ರಿಂದ 6.50 ರಷ್ಟು ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ 8.50 ರೂ.ಗಳಷ್ಟು ಏರಿಕೆಯಾಗಿದ್ದು, 1764.50 ರೂ. ಮುಂಬೈನಲ್ಲಿ ಬೆಲೆ 1605 ರೂ., ಚೆನ್ನೈನಲ್ಲಿ 1817 ರೂಪಾಯಿ ಆಗಿದೆ.
ಜುಲೈ 1, 2024 ರಂದು ಹಿಂದಿನ ಹೊಂದಾಣಿಕೆಯನ್ನು ಅನುಸರಿಸಿ, 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 30 ರೂಪಾಯಿಯಷ್ಟು ಕಡಿಮೆ ಮಾಡಲಾಗಿತ್ತು.
ಸಬ್ಸಿಡಿ ರಹಿತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಸಿಲಿಂಡರ್ ದೆಹಲಿಯಲ್ಲಿ 803 ರೂ.ಗೆ ಲಭ್ಯವಿದೆ. ಕೋಲ್ಕತ್ತಾದಲ್ಲಿ ಈ ಸಿಲಿಂಡರ್ ಬೆಲೆ 829 ರೂಪಾಯಿ, ಮುಂಬೈನಲ್ಲಿ 802.50 ಮತ್ತು ಚೆನ್ನೈನಲ್ಲಿ 818.50 ಕ್ಕೆ ಲಭ್ಯವಿದೆ. ಮಹಿಳಾ ದಿನದಂದು ಈ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿತ್ತು. ಇದರಿಂದಾಗಿ ಪ್ರತಿ ಸಿಲಿಂಡರ್ ಬೆಲೆ 100 ರೂಪಾಯಿ ಆಗಿದೆ. ಇದಾದ ಬಳಿಕ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಜೂನ್‌ನಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 19 ರೂಪಾಯಿ, ಮೇ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 19 ರೂಪಾಯಿ ಇಳಿಕೆಯಾಗಿತ್ತು. ಏಪ್ರಿಲ್‌ಗೂ ಮುನ್ನ ಸತತ ಮೂರು ತಿಂಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಏರಿಕೆಯಾಗಿತ್ತು.