ಸಾಂದರ್ಭಿಕ ಚಿತ್ರ 
ವಾಣಿಜ್ಯ

ಚಿಲ್ಲರೆ ಹಣದುಬ್ಬರ ಶೇ. 3.54ಕ್ಕೆ ಇಳಿಕೆ; ಇದು ಕಳೆದ ಐದು ವರ್ಷಗಳಲ್ಲೇ ಅತಿಕಡಿಮೆ

ಇದು 5 ವರ್ಷಗಳಲ್ಲಿ ಮೊದಲ ಬಾರಿಗೆ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇಕಡಾ 4 ಕ್ಕಿಂತ ಕಡಿಮೆಯಾಗಿದೆ.

ನವದೆಹಲಿ: ಕಳೆದ ವರ್ಷದ ಡಿಸೆಂಬರ್‌ನಿಂದ ಚಿಲ್ಲರೆ ಹಣದುಬ್ಬರವು ಸತತ ಇಳಿಕೆಯಾಯಾಗುತ್ತಿದ್ದು, ಜುಲೈನಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 3.54 ಕ್ಕೆ ತಗ್ಗಿದೆ. ಇದು 5 ವರ್ಷಗಳಲ್ಲಿ ಮೊದಲ ಬಾರಿಗೆ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇಕಡಾ 4 ಕ್ಕಿಂತ ಕಡಿಮೆಯಾಗಿದೆ.

ಕೆಲವು ಆಹಾರ ವಸ್ತುಗಳ ಬೆಲೆಗಳು ಸ್ವಲ್ಪಮಟ್ಟಿಗೆ ಕಡಿಮೆಯಾಗಿರುವುದರಿಂದ ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ಕೇಂದ್ರ ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರವು ಜೂನ್ 2024 ರಲ್ಲಿ ಶೇ. 5.08 ರಷ್ಟು ಇತ್ತು. ಅದು ಜುಲೈನಲ್ಲಿ ಶೇ. 3.54ಕ್ಕೆ ಇಳಿದಿದೆ. ಜುಲೈ 2023 ರಲ್ಲಿ ಶೇಕಡಾ 7.44 ರಷ್ಟಿತ್ತು.

ರಾಷ್ಟ್ರೀಯ ಅಂಕಿಅಂಶ ಕಚೇರಿ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಆಹಾರದ ಹಣದುಬ್ಬರವು ಜುಲೈನಲ್ಲಿ ಶೇ. 5.42ಕ್ಕೆ ಇಳಿದಿದೆ. ಆಹಾರ ಹಣದುಬ್ಬರವು ಜೂನ್‌ನಲ್ಲಿ ಶೇ. 9.36 ರಷ್ಟು ಇತ್ತು.

ಜುಲೈನಿಂದ ಸೆಪ್ಟಂಬರ್​ವರೆಗಿನ ತ್ರೈಮಾಸಿಕದಲ್ಲಿ ಹಣದುಬ್ಬರ ಶೇ. 4.4ರಷ್ಟಿರಬಹುದು ಎಂದು ಆರ್​ಬಿಐ ಅಂದಾಜು ಮಾಡಿತ್ತು. ಆದರೆ, ವಾಸ್ತವದಲ್ಲಿ ಹಣದುಬ್ಬರ ಈ ಅವಧಿಯಲ್ಲಿ ಇನ್ನೂ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT