ಭಾರತೀಯ ಷೇರುಮಾರುಕಟ್ಟೆ 
ವಾಣಿಜ್ಯ

Indian Stock Market: ವಾರದ ಮೊದಲ ದಿನವೇ ಚೇತೋಹಾರಿ ವಹಿವಾಟು; Sensex, Nifty ಸೂಚ್ಯಂಕ ಏರಿಕೆ!

ಕುಸಿತದಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕಳೆದ ಶುಕ್ರವಾರ ವಾರದ ವಹಿವಾಟು ಅಂತ್ಯದ ವೇಳೆ ಭರ್ಜರಿ ಕಮ್ ಬ್ಯಾಕ್ ಮಾಡಿತ್ತು. ಈ ವೇಳೆ ಸೆನ್ಸೆಕ್ಸ್ 759.05 ಅಂಕ ಮತ್ತು ನಿಫ್ಟಿ 216.95 ಅಂಕಗಳ ಏರಿಕೆಯೊಂದಿಗೆ ವಾರದ ವಹಿವಾಟು ಅಂತ್ಯಗೊಳಿಸಿದ್ದವು.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಸತತ 2ನೇ ದಿನ ಚೇತೋಹಾರಿ ವಹಿವಾಟು ನಡೆಸಿದ್ದು, ವಾರದ ಮೊದಲ ದಿನ ಸೋಮವಾರ ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯಲ್ಲಿ ವಹಿವಾಟು ಅಂತ್ಯಗೊಳಿಸಿವೆ.

ಕುಸಿತದಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕಳೆದ ಶುಕ್ರವಾರ ವಾರದ ವಹಿವಾಟು ಅಂತ್ಯದ ವೇಳೆ ಭರ್ಜರಿ ಕಮ್ ಬ್ಯಾಕ್ ಮಾಡಿತ್ತು. ಈ ವೇಳೆ ಸೆನ್ಸೆಕ್ಸ್ 759.05 ಅಂಕ ಮತ್ತು ನಿಫ್ಟಿ 216.95 ಅಂಕಗಳ ಏರಿಕೆಯೊಂದಿಗೆ ವಾರದ ವಹಿವಾಟು ಅಂತ್ಯಗೊಳಿಸಿದ್ದವು.

ಇಂದು ಅಂದರೆ ವಾರದ ವಹಿವಾಟಿನ ಆರಂಭಿಕ ದಿನವಾದ ಸೋಮವಾರ ಅದೇ ಪ್ರವೃತ್ತಿಯನ್ನು ಮುಂದುವರೆಸಿರುವ ಸೂಚ್ಯಂಕಗಳು ಏರಿಕೆಯಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.56 ರಿಂದ ಶೇ.0.59ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 445.29 ಅಂಕಗಳ ಏರಿಕೆಯೊಂದಿಗೆ 80,248.08 ಅಂಕಗಳಿಗೆ ಏರಿಕೆಯಾಗಿದೆ. ಇದರೊಂದಿಗೆ ಸೆನ್ಸೆಕ್ಸ್ ಮೊದಲ ಬಾರಿಗೆ ತಿಂಗಳ ಗರಿಷ್ಠ ಮಟ್ಟ ತಲುಪಿದೆ. ಅಂತೆಯೇ ನಿಫ್ಟಿ ಕೂಡ 142.90 ಅಂಕಗಳ ಏರಿಕೆಯೊಂದಿಗೆ 24,274.00 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಬ್ಲೂಚಿಪ್ ಷೇರುಗಳ ಮೌಲ್ಯ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪ್ರಮುಖವಾಗಿ ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್ ಮತ್ತು HDFC ಬ್ಯಾಂಕ್ ಸಂಸ್ಥೆಗಳ ಷೇರುಗಳ ಮೌಲ್ಯ ಏರಿಕೆಯಾಗಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಅಲ್ಟ್ರಾಟೆಕ್ ಸಿಮೆಂಟ್, JSW ಸ್ಟೀಲ್, ಅದಾನಿ ಪೋರ್ಟ್ಸ್, ಟೆಕ್ ಮಹೀಂದ್ರಾ, ಟೈಟಾನ್, ಮಾರುತಿ, ಮಹೀಂದ್ರ & ಮಹೀಂದ್ರಾ, ಟಾಟಾ ಸ್ಟೀಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಾಭಾಂಶ ಗಳಿಸಿದರೆ, NTPC, ಹಿಂದೂಸ್ತಾನ್ ಯೂನಿಲಿವರ್, ಕೋಟಕ್ ಮಹೀಂದ್ರಾ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್ ಮತ್ತು ಲಾರ್ಸೆನ್ ಮತ್ತು ಟೂಬ್ರೊ ಷೇರುಗಳು ನಷ್ಟ ಅನುಭವಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್