ಮುಂಬೈ: ಕಳೆದೊಂದು ವಾರದಿಂದ ಸತತ ಮಹಾ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಸೋಮವಾರ ಕೊನೆಗೂ ಏರಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದೆ.
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.64ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.70ರಷ್ಟು ಏರಿಕೆಯಾಗಿದೆ. ಸೆನ್ಸೆಕ್ಸ್ ಇಂದು 498.58 ಅಂಕಗಳ ಏರಿಕೆಯೊಂದಿಗೆ 78,540.17 ಅಂಕಗಳಿಗೆ ಏರಿದ್ದರೆ, ನಿಫ್ಟಿ 165.95 ಅಂಕಗಳ ಏರಿಕೆಯೊಂದಿಗೆ 23,753.45 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಮೆಟಲ್ ವಲಯದ ಷೇರುಗಳ ಮೌಲ್ಯದಲ್ಲಿ ಗಣನೀಯ ಏರಿಕೆ ಕಂಡುಬಂದಿದಿದೆ. ಜೊಮ್ಯಾಟೋ ಷೇರುಗಳ ಮೌಲ್ಯದಲ್ಲಿ ಗಣನೀಯ ಕುಸಿತ ಕಂಡುಬಂದಿದ್ದು, ಶೇ.3ರಷ್ಟು ಕುಸಿತವಾಗಿದೆ.
3 ಲಕ್ಷ ಕೋಟಿ ರೂ ಲಾಭ!
ಇನ್ನು ಇಂದಿನ ಚೇತೋಹಾರಿ ವಹಿವಾಟಿನಲ್ಲಿ ಹೂಡಿಕೆದಾರರಿಗೆ 3.11ಲಕ್ಷ ಕೋಟಿ ರೂ ಲಾಭವಾಗಿದ್ದು, ಬಿಎಸ್‌ಇ ಮಾರುಕಟ್ಟೆ ಬಂಡವಾಳೀಕರಣವು 3.11 ಲಕ್ಷ ಕೋಟಿ ರೂ.ಗಳಷ್ಟು ಏರಿಕೆಯಾಗಿ 4,44,10,521 ಕೋಟಿ ರೂ.ಗಳಿಗೆ ತಲುಪಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಎಚ್‌ಡಿಎಫ್‌ಸಿ ಬ್ಯಾಂಕ್ ಲಿಮಿಟೆಡ್, ಬಜಾಜ್ ಫೈನಾನ್ಸ್, ಐಸಿಐಸಿಐ ಬ್ಯಾಂಕ್ ಲಿಮಿಟೆಡ್, ಟಾಟಾ ಸ್ಟೀಲ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಲಿಮಿಟೆಡ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಟಾಟಾ ಸ್ಟೀಲ್ ಲಿಮಿಟೆಡ್, ಟೆಕ್ ಮಹೀಂದ್ರಾ ಲಿಮಿಟೆಡ್, ಐಟಿಸಿ ಲಿಮಿಟೆಡ್, ಇಂಡಸ್ಇಂಡ್ ಬ್ಯಾಂಕ್ ಲಿಮಿಟೆಡ್, ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಅಂತೆಯೇ ಜೊಮ್ಯಾಟೊ ಮತ್ತು ಸನ್ ಫಾರ್ಮಾ ಸಂಸ್ಥೆಯ ಷೇರುಗಳು ನಷ್ಟ ಅನುಭವಿಸಿವೆ.