ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ಕೇಂದ್ರ ಮಧ್ಯಂತರ ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ!

ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ 14 ರೂಪಾಯಿ ಏರಿಕೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ
Shilpa D
Updated On : 1 Feb 2024, 3:50 pm

ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ 14 ರೂಪಾಯಿ ಏರಿಕೆ ಮಾಡಲಾಗಿದೆ.

ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪರಿಷ್ಕೃತ ಬೆಲೆ ಇಂದಿನಿಂದ (ಫೆಬ್ರವರಿ 1) ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು.

ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ.

Advertisement

Advertisement

ಇದನ್ನೂ ಓದಿ: ಮಧ್ಯಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, 450 ರೂ.ಗೆ ಎಲ್ ಪಿಜಿ ಸಿಲಿಂಡರ್ ಸೇರಿ ಹಲವು ಭರವಸೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್  ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್  ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments