India's GDP growth is massive 8.4 % in Q3; FY24 growth upwardly revised at 7.6 % 
ವಾಣಿಜ್ಯ

ಮೂರನೇ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ GDP ವೃದ್ಧಿ; ಶೇ. 8.4 ರಷ್ಟು ಬೆಳವಣಿಗೆ ದಾಖಲು

2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

ನವದೆಹಲಿ: 2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ದೇಶದ ಜಿಡಿಪಿ ಶೇ. 8.4ರಷ್ಟು ಬೆಳೆದಿದೆ.

ನಿನ್ನೆಯವರೆಗೂ ಹಲವು ಆರ್ಥಿಕ ತಜ್ಞರು ಈ ಕ್ವಾರ್ಟರ್​ನಲ್ಲಿ ಶೇ. 6ರಿಂದ 7ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿಬಹುದು ಎಂದು ಅಂದಾಜು ಮಾಡಿದ್ದರು. ಆರ್​ಬಿಐ ಮಾಡಿದ ಅಂದಾಜು ಕೂಡ ಶೇ. 7ರ ಆಸುಪಾಸು ಇತ್ತು. ಆದರೆ ಭಾರತದ ನೈಜ ಜಿಡಿಪಿ ವೃದ್ಧಿ ಈಗ ಎಲ್ಲರನ್ನೂ ಅಚ್ಚರಿಗೊಳಿಸುವಷ್ಟು ಹೆಚ್ಚಿನ ಮಟ್ಟದಲ್ಲಿ ಇದೆ.

ಈ ಹಣಕಾಸು ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳೆದಿತ್ತು. ಎರಡನೇ ಕ್ವಾರ್ಟರ್​ನಲ್ಲಿ ಶೇ. 7.6 ರಷ್ಟು ಬೆಳೆದಿದೆ. ಮೂರನೇ ಕ್ವಾರ್ಟರ್ ಇನ್ನೂ ಹೆಚ್ಚಿನ ಅಚ್ಚರಿ ಮೂಡಿಸಿದೆ. ಒಟ್ಟಾರೆ ಈ ಹಣಕಾಸು ವರ್ಷದ ಮೊದಲ ಮೂರು ಕ್ವಾರ್ಟರ್ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಸರಾಸರಿಯಾಗಿ ಶೇ. 7.93ರಷ್ಟು ಇದೆ. ಅಂದರೆ ಶೇ. 8ಕ್ಕೆ ಸಮೀಪ ಇದೆ.

2023-24ರ ಮೂರನೇ ಕ್ವಾರ್ಟರ್​ನಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ ಇದೆ. ಹಿಂದಿನ ವರ್ಷದ ಇದೇ ಕ್ವಾರ್ಟರ್​ನಲ್ಲಿ 40.35 ಲಕ್ಷ ಕೋಟಿ ರೂ ಇತ್ತು. ಈ ಬಾರಿ ಶೇ. 8.4ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!