ಸಂಗ್ರಹ ಚಿತ್ರ 
ವಾಣಿಜ್ಯ

ಹೊಸವರ್ಷಕ್ಕೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ಏರಿಕೆ: 10 ಗ್ರಾಂ ಚಿನ್ನದ ಬೆಲೆ 64,090 ರೂ.!

ಹೊಸವರ್ಷಕ್ಕೆ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದು ಗ್ರಾಹಕರ ಕೈ ಸುಡುವಂತಾಗಿದೆ.

ನವದೆಹಲಿ: ಹೊಸವರ್ಷಕ್ಕೆ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದು ಗ್ರಾಹಕರ ಕೈ ಸುಡುವಂತಾಗಿದೆ.

ಮಂಗಳವಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂಪಾಯಿ ಆಗಿದ್ದು ಆ ಮೂಲಕ 64,090 ರೂಪಾಯಿಗೆ ಏರಿಕೆಯಾಗಿದೆ. 

ಇಂದು ಅಂದರೆ ಮಂಗಳವಾರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 58,750 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ರೂ. 10 ಗ್ರಾಂಗೆ 64,090 ರೂಪಾಯಿಗೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 58,550 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ರೂ. 10 ಗ್ರಾಂಗೆ 63,870 ರೂಪಾಯಿ ಇತ್ತು.

ಚಿನ್ನದ ಶುದ್ಧತೆಯನ್ನು ಗುರುತಿಸುವುದು ಹೇಗೆ?
(ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಸ್ಟ್ಯಾಂಡರ್ಡೈಸೇಶನ್) ಚಿನ್ನದ ಶುದ್ಧತೆಯನ್ನು ಗುರುತಿಸಲು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಸ್ಟ್ಯಾಂಡರ್ಡೈಸೇಶನ್ ಮೂಲಕ ಹಾಲ್ ಮಾರ್ಕ್ಗಳನ್ನು ನೀಡಲಾಗುತ್ತದೆ. 24 ಕ್ಯಾರೆಟ್ ಚಿನ್ನದ ಆಭರಣಗಳ ಮೇಲೆ 999, 23 ಕ್ಯಾರೆಟ್‌ನಲ್ಲಿ 958, 22 ಕ್ಯಾರೆಟ್‌ನಲ್ಲಿ 916, 21 ಕ್ಯಾರೆಟ್‌ನಲ್ಲಿ 875 ಮತ್ತು 18 ಕ್ಯಾರೆಟ್‌ನಲ್ಲಿ 750 ಎಂದು ಬರೆಯಲಾಗಿದೆ. ಹೆಚ್ಚಾಗಿ ಚಿನ್ನವನ್ನು 22 ಕ್ಯಾರೆಟ್‌ನಲ್ಲಿ ಮಾರಾಟ ಮಾಡಲಾಗುತ್ತದೆ. ಆದರೆ ಕೆಲವರು 18 ಕ್ಯಾರೆಟ್‌ಗಳನ್ನು ಸಹ ಬಳಸುತ್ತಾರೆ. ಕ್ಯಾರೆಟ್ 24 ಅನ್ನು ಮೀರುವುದಿಲ್ಲ ಮತ್ತು ಹೆಚ್ಚಿನ ಕ್ಯಾರೆಟ್ ಚಿನ್ನವು ಶುದ್ಧವಾಗಿರುತ್ತದೆ.

22 ಮತ್ತು 24 ಕ್ಯಾರೆಟ್ ಚಿನ್ನದ ನಡುವಿನ ವ್ಯತ್ಯಾಸ
24 ಕ್ಯಾರೆಟ್ ಚಿನ್ನವು 99.9 ಪ್ರತಿಶತ ಶುದ್ಧವಾಗಿರುತ್ತದೆ ಮತ್ತು 22 ಕ್ಯಾರೆಟ್ ಚಿನ್ನವು ಸರಿಸುಮಾರು 91 ಪ್ರತಿಶತ ಶುದ್ಧವಾಗಿದೆ. 22 ಕ್ಯಾರೆಟ್ ಚಿನ್ನದಲ್ಲಿ ತಾಮ್ರ, ಬೆಳ್ಳಿ, ಸತು ಮುಂತಾದ ಇತರ ಲೋಹಗಳನ್ನು ಶೇ.9 ರಷ್ಟು ಮಿಶ್ರಣ ಮಾಡಿ ಆಭರಣಗಳನ್ನು ತಯಾರಿಸಲಾಗುತ್ತದೆ. 24 ಕ್ಯಾರೆಟ್ ಚಿನ್ನವು ಅತ್ಯಂತ ಶುದ್ಧವಾಗಿದ್ದರೂ, 24 ಕ್ಯಾರೆಟ್ ಚಿನ್ನದಿಂದ ಆಭರಣವನ್ನು ಮಾಡಲಾಗುವುದಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ. ಆದ್ದರಿಂದ ಹೆಚ್ಚಿನ ಅಂಗಡಿಯವರು 22 ಕ್ಯಾರೆಟ್‌ನಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT