ಸಾಂದರ್ಭಿಕ ಚಿತ್ರ 
ವಾಣಿಜ್ಯ

KSDL ಡಿಟರ್ಜೆಂಟ್ ಗಳ ಉತ್ಪಾದನೆಯಲ್ಲಿ ಸಾರ್ವಕಾಲಿಕ ದಾಖಲೆ!

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೌಲ್ಯದ 852  ಟನ್  ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು...

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೌಲ್ಯದ 852  ಟನ್  ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹೇಳಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು, ಇದುವರೆಗಿನ ದಾಖಲೆಯಾಗಿತ್ತು' ಎಂದಿದ್ದಾರೆ.

KSDL ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರ್ಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಉತ್ಪಾದನೆಯತ್ತಲೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಕೂಡ ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1171.07 ಕೋಟಿ ರೂ. ಮೊತ್ದದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಎಂ ಬಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT