ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿ 
ವಾಣಿಜ್ಯ

ಮುಕೇಶ್‌ ಅಂಬಾನಿ ಹಿಂದಿಕ್ಕಿದ ಗೌತಮ್‌ ಅದಾನಿ: ಭಾರತದ, ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ!

ಹಿಂಡನ್ ಬರ್ಗ್ ವರದಿ ಕುರಿತಂತೆ ಕೋರ್ಟ್ ನ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಗೌತಮ್‌ ಅದಾನಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ನವದೆಹಲಿ: ಹಿಂಡನ್ ಬರ್ಗ್ ವರದಿ ಕುರಿತಂತೆ ಕೋರ್ಟ್ ನ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಗೌತಮ್‌ ಅದಾನಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಹೌದು.. ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿ ಅದಾನಿ ಇದ್ದು, ರಿಲಯನ್ಸ್ ಸಮೂಹದ ಮುಖ್ಯಸ್ಥ ಅಂಬಾನಿ 13ನೇ ಸ್ಥಾನದಲ್ಲಿದ್ದಾರೆ. ವರದಿಯಲ್ಲಿರುವಂತೆ ಅದಾನಿ ಒಟ್ಟು 97.6 ಬಿಲಿಯನ್‌ ಅಮೆರಿಕನ್‌ ಡಾಲರ್‌ ಸಂಪತ್ತಿನ ಒಡೆಯರಾಗಿದ್ದಾರೆ. ಅತ್ತ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು ಅವರು ಒಟ್ಟು ಸಂಪತ್ತಿನ ಮೌಲ್ಯ 97 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿದೆ ಎಂದು ಹೇಳಲಾಗಿದೆ.

ಅದಾನಿ ಸಂಸ್ಥೆಗಳು ಅವ್ಯವಹಾರ ನಡೆಸಿವೆ ಎಂಬ ಹಿಂಡೆನ್‌ಬರ್ಗ್‌ ವರದಿಯನ್ನಾಧರಿಸಿ ಸಂಸ್ಥೆಯ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದ ನಂತರ ಅದಾನಿ ಷೇರುಗಳ ಬೆಲೆ ಏರಿಕೆ ಕಂಡಿತ್ತು. ಇದಕ್ಕಿಂತ ಒಂದು ದಿನ ಹಿಂದೆ ಅದಾನಿ ಸಂಪತ್ತು ಮೌಲ್ಯ ರೂ. 8.98 ಲಕ್ಷ ಕೋಟಿ ಇದ್ದರೆ ಒಂದೇ ದಿನದಲ್ಲಿ ಅದು ರೂ. 9.37 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT