ಸಾಂದರ್ಭಿಕ ಚಿತ್ರ 
ವಾಣಿಜ್ಯ

ರಾಮ ಮಂದಿರ: ಪ್ರಾಣ ಪ್ರತಿಷ್ಠಾಪನೆ ಸಮಾರಂಭದಿಂದ ರೂ. 1 ಲಕ್ಷ ಕೋಟಿ ರೂ. ವ್ಯವಹಾರದ ನಿರೀಕ್ಷೆ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದೊಂದಿಗೆ 1 ಲಕ್ಷ ಕೋಟಿ ರೂಪಾಯಿ ಮೊತ್ತದ ವ್ಯವಹಾರವನ್ನು ನಿರೀಕ್ಷಿಸಲಾಗಿದೆ ಎಂದು ವ್ಯಾಪಾರಿಗಳ ಸಂಸ್ಥೆ CAIT ಸೋಮವಾರ ತಿಳಿಸಿದೆ.

ಅಯೋಧ್ಯೆ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದೊಂದಿಗೆ 1 ಲಕ್ಷ ಕೋಟಿ ರೂಪಾಯಿ ಮೊತ್ತದ ವ್ಯವಹಾರವನ್ನು ನಿರೀಕ್ಷಿಸಲಾಗಿದೆ ಎಂದು ವ್ಯಾಪಾರಿಗಳ ಸಂಸ್ಥೆ CAIT ಸೋಮವಾರ ತಿಳಿಸಿದೆ. ವಿವಿಧ ರಾಜ್ಯಗಳ 30 ನಗರಗಳಾದ್ಯಂತ ವ್ಯಾಪಾರ ಸಂಘಗಳಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT) ಇಷ್ಟು ಪ್ರಮಾಣದ ವ್ಯವಹಾರವನ್ನು ಅಂದಾಜಿಸಿದೆ.

"ಈ ಕಾರ್ಯಕ್ರಮವು ಧಾರ್ಮಿಕ ಭಾವನೆಗಳೊಂದಿಗೆ ಪ್ರತಿಧ್ವನಿಸುವುದಲ್ಲದೆ ಆರ್ಥಿಕ ಚಟುವಟಿಕೆಗಳಲ್ಲಿ ವೃದ್ಧಿಗೆ ಕಾರಣವಾಗಲಿದೆ. ದೇವರ ಮೇಲಿನ ಜನರ ನಂಬಿಕೆಯು ದೇಶದ ಸಾಂಪ್ರದಾಯಿಕ ಆರ್ಥಿಕ ವ್ಯವಸ್ಥೆಯ ಆಧಾರದ ಮೇಲೆ ಅನೇಕ ಹೊಸ ವ್ಯವಹಾರಗಳ ಸೃಷ್ಟಿಗೆ ಕಾರಣವಾಗುತ್ತಿದೆ ಎಂದು CAIT ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ತಿಳಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಅಂಗವಾಗಿ  ದೇಶಾದ್ಯಂತ ಸುಮಾರು 30,000 ವಿವಿಧ ವರ್ತಕ ಸಂಘಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಶ್ರೀರಾಮ ಧ್ವಜಗಳು, ಬ್ಯಾನರ್‌ಗಳು, ಕ್ಯಾಪ್‌ಗಳು, ಟೀ ಶರ್ಟ್‌ಗಳು ಮತ್ತು ರಾಮ ಮಂದಿರದ ಚಿತ್ರವನ್ನು ಒಳಗೊಂಡ ಮುದ್ರಿತ 'ಕುರ್ತಾ'ಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

"ರಾಮ ಮಂದಿರ ಮಾದರಿಗಳ ಬೇಡಿಕೆಯು ತ್ವರಿತ ರೀತಿಯಲ್ಲಿ ಹೆಚ್ಚಾಗಿದೆ ಮತ್ತು ದೇಶಾದ್ಯಂತ 5 ಕೋಟಿಗೂ ಹೆಚ್ಚು ಮಾದರಿಗಳು ಮಾರಾಟವಾಗುವ ನಿರೀಕ್ಷೆಯಿದೆ, ಇದಕ್ಕಾಗಿ ಸಣ್ಣ ಉತ್ಪಾದನಾ ಘಟಕಗಳು ವಿವಿಧ ರಾಜ್ಯಗಳ ಅನೇಕ ನಗರಗಳಲ್ಲಿ ಹಗಲು-ರಾತ್ರಿ ಕೆಲಸ ಮಾಡುತ್ತಿವೆ. ಮುಂದಿನ ವಾರದಲ್ಲಿ ದೆಹಲಿಯ 200 ಕ್ಕೂ ಹೆಚ್ಚು ಪ್ರಮುಖ ಮಾರುಕಟ್ಟೆಗಳು ಮತ್ತು ಹೆಚ್ಚಿನ ಸಂಖ್ಯೆಯ ಸಣ್ಣ ಮಾರುಕಟ್ಟೆಗಳು ಶ್ರೀರಾಮ ಧ್ವಜಗಳು ಮತ್ತು ಅಲಂಕಾರಗಳಿಗೆ ಸಾಕ್ಷಿಯಾಗಲಿವೆ ಎಂದು ಅವರು ಮಾಹಿತಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT