ಸಂಗ್ರಹ ಚಿತ್ರ 
ವಾಣಿಜ್ಯ

ಗುಡ್‌ ನ್ಯೂಸ್‌: ಸತತ 4ನೇ ಬಾರಿಗೆ ವಾಣಿಜ್ಯ LPG ಸಿಲಿಂಡರ್‌ ಬೆಲೆ ಇಳಿಕೆ

ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್‌ ಸಿಕ್ಕಿದೆ, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಸಿವೆ.

ಬೆಂಗಳೂರು: ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್‌ ಸಿಕ್ಕಿದೆ, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಸಿವೆ.

ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಯಾದ ಇಂಡಿಯನ್ ಆಯಿಲ್‌ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.

ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ. ಜೂನ್‌ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂಪಾಯಿ ಇತ್ತು. ಇದೀಗ 31 ರೂಪಾಯಿ ಇಳಿಕೆಯಾಗಿದೆ.

ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇನ್ನು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ ನೋಡುವುದಾದರೆ, 14.5 ಕೆಜಿಯ ಡೊಮೆಸ್ಟಿಕ್ ಸಿಲಿಂಡರ್ ಬೆಲೆ 905.5 ರೂಪಾಯಿ ಇದೆ. ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!