ಆರ್ ಬಿಐ ಗವರ್ನರ್  
ವಾಣಿಜ್ಯ

RBI ವಿತ್ತೀಯ ನೀತಿ ಪ್ರಕಟ: ಸತತ 8ನೇ ಬಾರಿ ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ

ಮುಂಬೈಯಲ್ಲಿ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಸತತ ದರ ಹೆಚ್ಚಳದ ನಂತರ ಕಳೆದ ವರ್ಷ ಏಪ್ರಿಲ್‌ನಲ್ಲಿ ದರ ಹೆಚ್ಚಳವನ್ನು ಸ್ಥಗಿತಗೊಳಿಸಲಾಯಿತು ಎಂದು ವಿವರಿಸಿದರು.

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಸತತ ಎಂಟನೇ ಬಾರಿಗೆ ನೀತಿ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ನಿರ್ಧರಿಸಿದ್ದು, ಹಣದುಬ್ಬರದ ಮೇಲೆ ಬಿಗಿಯಾದ ನಿಗಾ ವಹಿಸುವುದಾಗಿ ಹೇಳಿದೆ.

ಇಂದು ಮುಂಬೈಯಲ್ಲಿ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಸತತ ದರ ಹೆಚ್ಚಳದ ನಂತರ ಕಳೆದ ವರ್ಷ ಏಪ್ರಿಲ್‌ನಲ್ಲಿ ದರ ಹೆಚ್ಚಳವನ್ನು ಸ್ಥಗಿತಗೊಳಿಸಲಾಯಿತು ಎಂದು ವಿವರಿಸಿದರು.

ಪ್ರಸಕ್ತ ಹಣಕಾಸು ವರ್ಷದ ಎರಡನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MPC) ರೆಪೊ ದರವನ್ನು ಶೇಕಡಾ 6.5 ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ.

ಈ ವರ್ಷ ಸಾಮಾನ್ಯ ಮಾನ್ಸೂನ್ ನಿರೀಕ್ಷೆಯ ನಡುವೆ ಎಂಪಿಸಿ, ಹೆಚ್ಚಿದ ಆಹಾರ ಹಣದುಬ್ಬರವನ್ನು ಗಮನಿಸುತ್ತಿದೆ. ಆರ್‌ಬಿಐ ಬೆಳವಣಿಗೆಯ ಪ್ರಕ್ಷೇಪಣವನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7ರ ಹಿಂದಿನ ಅಂದಾಜಿನಿಂದ ಶೇಕಡಾ 7.2ಕ್ಕೆ ಏರಿಕೆ ಮಾಡಿದೆ.

ರೆಪೊ ದರ: ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ: ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT