ಏರ್ ಇಂಡಿಯಾ ವಿಮಾನ  
ವಾಣಿಜ್ಯ

25 ಕ್ಯಾಬಿನ್ ಸಿಬ್ಬಂದಿ ವಜಾ ಆದೇಶ ಹಿಂಪಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್; ಮುಷ್ಕರ ಅಂತ್ಯ

ಕ್ಯಾಬಿನ್ ಸಿಬ್ಬಂದಿ ಎತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಏರ್‌ಲೈನ್ ಭರವಸೆ ನೀಡಿದ ನಂತರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗ ಮುಷ್ಕರವನ್ನು ಹಿಂಪಡೆದಿದೆ.

ನವದೆಹಲಿ: ಕ್ಯಾಬಿನ್ ಸಿಬ್ಬಂದಿ ಎತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಏರ್‌ಲೈನ್ ಭರವಸೆ ನೀಡಿದ ನಂತರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗ ಮುಷ್ಕರವನ್ನು ಹಿಂಪಡೆದಿದ್ದು, ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಇದಲ್ಲದೆ, 25 ಕ್ಯಾಬಿನ್ ಸಿಬ್ಬಂದಿಗೆ ನೀಡಲಾದ ಕೆಲಸದಿಂದ ವಜಾ ಪತ್ರಗಳನ್ನು ಹಿಂಪಡೆಯಲು ಏರ್‌ಲೈನ್ ಒಪ್ಪಿಕೊಂಡಿದೆ ಮತ್ತು ನಿರ್ವಹಣೆಯು ಸೇವಾ ನಿಯಮಗಳ ಪ್ರಕಾರ ಪ್ರಕರಣಗಳನ್ನು ಪರಿಶೀಲಿಸುವುದಾಗಿ ಹೇಳಿದೆ.

ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆ, ಮಂಗಳವಾರ 200 ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಅನಾರೋಗ್ಯದ ನೆಪ ಹೇಳಿ ಸಾಮೂಹಿಕ ರಜೆ ಹಾಕಿದ್ದರು ಮತ್ತು ಕೆಲವು ಕ್ಯಾಬಿನ್ ಸಿಬ್ಬಂದಿ ಮುಷ್ಕರ ನಡೆಸಿದರು. ಪರಿಣಾಮ ಬುಧವಾರ 70 ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು.

ಇಂದು ರಾಷ್ಟ್ರ ರಾಜಧಾನಿಯಲ್ಲಿನ ಮುಖ್ಯ ಕಾರ್ಮಿಕ ಆಯುಕ್ತರ(ಕೇಂದ್ರ) ಕಚೇರಿಯಲ್ಲಿ ಕ್ಯಾಬಿನ್ ಸಿಬ್ಬಂದಿ ಪ್ರತಿನಿಧಿಗಳು ಮತ್ತು ವಿಮಾನಯಾನ ಸಂಸ್ಥೆಯ ಪ್ರತಿನಿಧಿಗಳ ನಡುವಿನ ಸಂಧಾನ ಸಭೆಯಲ್ಲಿ, ಮುಷ್ಕರ ಹಿಂತೆಗೆದುಕೊಳ್ಳುವ ಮತ್ತು ವಜಾ ಆದೇಶ ಹಿಂಪಡೆಯುವ ನಿರ್ಧಾರ ತೆಗೆದುಕೊಳ್ಳಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ