ಸಂಗ್ರಹ ಚಿತ್ರ 
ವಾಣಿಜ್ಯ

33 ವರ್ಷಗಳ ನಂತರ ಇಂಗ್ಲೆಂಡ್ ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ RBI!

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಫಾರೆಕ್ಸ್ ರಿಸರ್ವ್ಸ್​ನಲ್ಲಿರುವ ಒಂದಷ್ಟು ಚಿನ್ನವನ್ನು ಬ್ರಿಟನ್​ ನಿಂದ ಭಾರತಕ್ಕೆ ತಂದಿದೆ. ವರದಿಗಳ ಪ್ರಕಾರ ಬ್ಯಾಂಕ್ ಆಫ್ ಇಂಗ್ಲೆಂಡ್​ ನಲ್ಲಿ ಇಟ್ಟಿರುವ ನೂರು ಟನ್​ ಗೂ ಅಧಿಕ ಚಿನ್ನವನ್ನು ಆರ್ ಬಿಐ ಇತ್ತೀಚೆಗೆ ಭಾರತಕ್ಕೆ ವಾಪಸ್ ತಂದಿದೆ.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಫಾರೆಕ್ಸ್ ರಿಸರ್ವ್ಸ್​ನಲ್ಲಿರುವ ಒಂದಷ್ಟು ಚಿನ್ನವನ್ನು ಬ್ರಿಟನ್​ ನಿಂದ ಭಾರತಕ್ಕೆ ತಂದಿದೆ. ವರದಿಗಳ ಪ್ರಕಾರ ಬ್ಯಾಂಕ್ ಆಫ್ ಇಂಗ್ಲೆಂಡ್​ ನಲ್ಲಿ ಇಟ್ಟಿರುವ ನೂರು ಟನ್​ ಗೂ ಅಧಿಕ ಚಿನ್ನವನ್ನು ಆರ್ ಬಿಐ ಇತ್ತೀಚೆಗೆ ಭಾರತಕ್ಕೆ ವಾಪಸ್ ತಂದಿದೆ.

ಇಷ್ಟೊಂದು ಪ್ರಮಾಣದ ಚಿನ್ನವನ್ನು ವಿದೇಶದಿಂದ ಭಾರತಕ್ಕೆ ತಂದಿದ್ದು 1991ರ ಬಳಿಕ ಇದೇ ಮೊದಲು. ಮುಂಬರುವ ದಿನಗಳಲ್ಲಿ ಇನ್ನೂ ಸಾಕಷ್ಟು ಚಿನ್ನಗಳು ಭಾರತಕ್ಕೆ ವಾಪಸ್ ಬಂದು ಸೇರಲಿವೆ. ಇನ್ನು ಈ ಚಿನ್ನವನ್ನು ಕೆಲವೊಂದು ವ್ಯವಸ್ಥಾಪನಾ ಕಾರಣ ಮತ್ತು ವೈವಿಧ್ಯಮಯ ಸಂಗ್ರಹಣೆ ಉದ್ದೇಶದಿಂದ ದೇಶಿಯ ಖಜಾನೆಗಳಿಗೆ ತರಲಾಗುತ್ತಿದೆ.

ಮಾರ್ಚ್ 2023 ರ ಮಾಹಿತಿಯ ಪ್ರಕಾರ, ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

ಅನೇಕ ದೇಶಗಳ ಸೆಂಟ್ರಲ್ ಬ್ಯಾಂಕ್‌ಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್‌ನಲ್ಲಿ ಇರಿಸುತ್ತವೆ. ಇದರಲ್ಲಿ ಭಾರತವೂ ಒಂದು. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಸಾಕಷ್ಟು ಚಿನ್ನವನ್ನು ಲಂಡನ್‌ನಲ್ಲಿ ಇರಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಆರ್‌ಬಿಐ ಚಿನ್ನ ಖರೀದಿಸಲು ಆರಂಭಿಸಿತು ಮತ್ತು ಅದನ್ನು ಎಲ್ಲಿ ಸಂಗ್ರಹಿಸಬೇಕು ಎಂದು ನಿರ್ಧರಿಸಿತು. ವಿದೇಶದಲ್ಲಿ ಚಿನ್ನದ ದಾಸ್ತಾನು ಹೆಚ್ಚುತ್ತಿರುವ ಕಾರಣ ಭಾರತಕ್ಕೆ ಸ್ವಲ್ಪ ಚಿನ್ನವನ್ನು ತರಲು ನಿರ್ಧರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದಲಾಗುತ್ತಿರುವ ರಾಜಕೀಯ ಸಂಗತಿಗಳು ಮತ್ತು ಕರೆನ್ಸಿ ಮೌಲ್ಯ ಏರಿಳಿತದ ಭೀತಿಯಿಂದಾಗಿ ಆರ್‌ಬಿಐ ಈ ಈ ಚಿನ್ನವನ್ನು ಭಾರತಕ್ಕೆ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

1991 ರಲ್ಲಿ, ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಚಂದ್ರಶೇಖರ್ ನೇತೃತ್ವದ ಸರ್ಕಾರ ಹಣವನ್ನು ಸಂಗ್ರಹಿಸಲು ಚಿನ್ನವನ್ನು ಒತ್ತೆ ಇಟ್ಟಿತ್ತು. ಜುಲೈ 4 ಮತ್ತು 18 ರ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಜಪಾನ್‌ನಲ್ಲಿ 46.91 ಟನ್ ಚಿನ್ನವನ್ನು ಒತ್ತೆ ಇಟ್ಟು, $400 ಮಿಲಿಯನ್ ಸಾಲ ಪಡೆದುಕೊಂಡಿತ್ತು. ಸುಮಾರು 15 ವರ್ಷಗಳ ಹಿಂದೆ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ಅಡಿಯಲ್ಲಿ ಆರ್‌ಬಿಐ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) 200 ಟನ್ ಚಿನ್ನವನ್ನು ಖರೀದಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT