ಸಾಂದರ್ಭಿಕ ಚಿತ್ರ  
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಹೀಗಿದೆ...

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆಯನ್ನು ಘೋಷಿಸಿದ ನಂತರ ಮೆಟ್ರೋ ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದು ತಿಂಗಳ ಆರಂಭ ದಿನ ಹೆಚ್ಚಾಗಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ಅಕ್ಟೋಬರ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ದರವನ್ನು 48.50 ರೂ ಹೆಚ್ಚಿಸಿದ್ದವು, ಸೆಪ್ಟೆಂಬರ್‌ನಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 39 ರೂಪಾಯಿ ಹೆಚ್ಚಿಸಲಾಗಿತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 8.50 ರೂಪಾಯಿಗಳ ಹೆಚ್ಚಳವನ್ನು ಘೋಷಿಸಿದ್ದವು.

ಕಳೆದ ಏಪ್ರಿಲ್ ನಿಂದ ಇದು 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಸತತ ನಾಲ್ಕನೇ ಬಾರಿ ಏರಿಕೆಯಾಗಿದೆ. ದೆಹಲಿ ಹೊರತಾಗಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯೂ ಹೆಚ್ಚಾಗಿದೆ. ಇತ್ತೀಚಿನ ಏರಿಕೆಯೊಂದಿಗೆ, ಚಿಲ್ಲರೆ ಬೆಲೆ ಈಗ ಮುಂಬೈನಲ್ಲಿ ರೂ 1,754.50, ಚೆನ್ನೈನಲ್ಲಿ ರೂ 1,964.50 ಮತ್ತು ಕೋಲ್ಕತ್ತಾದಲ್ಲಿ ರೂ 1,911.50 ಆಗಿದೆ.

ದೆಹಲಿಯ ಹೊರತಾಗಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯೂ ಹೆಚ್ಚಾಗಿದೆ. ಇತ್ತೀಚಿನ ಏರಿಕೆಯೊಂದಿಗೆ, ಚಿಲ್ಲರೆ ಬೆಲೆ ಈಗ ಮುಂಬೈನಲ್ಲಿ 1,754.50 ರೂಪಾಯಿ, ಚೆನ್ನೈನಲ್ಲಿ 1,964.50 ರೂಪಾಯಿ ಮತ್ತು ಕೋಲ್ಕತ್ತಾದಲ್ಲಿ 1,911.50 ರೂಪಾಯಿ ಆಗಿದೆ.

ನವೆಂಬರ್ 1ರಿಂದ ಬೆಂಗಳೂರಿನಲ್ಲಿ ಇರುವ ಎಲ್​ಪಿಜಿ ದರ

ಗೃಹಬಳಕೆ 14.2 ಕಿಲೋ ಗ್ಯಾಸ್ ಬೆಲೆ: 805.50 ರೂ

ಗೃಹ ಬಳಕೆ 5 ಕಿಲೋ ಗ್ಯಾಸ್ ಬೆಲೆ: 300.50 ರೂ

ವಾಣಿಜ್ಯ ಬಳಕೆ ಸಿಲಿಂಡರ್ 19 ಕಿಲೋ ಗ್ಯಾಸ್ ಬೆಲೆ: 1,879 ರೂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

SCROLL FOR NEXT