ಶಕ್ತಿಕಾಂತ್ ದಾಸ್  
ವಾಣಿಜ್ಯ

RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಶೇ.6.5ರಷ್ಟು ಮುಂದುವರಿಕೆ

ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MCC) ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ.

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಸತತ ಹತ್ತನೇ ಬಾರಿಗೆ ತನ್ನ ತ್ರೈಮಾಸಿಕ ನೀತಿ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ. ಆದರೆ ತನ್ನ ನಿಲುವಿನಲ್ಲಿ ತಟಸ್ಥತೆಗೆ ಬದಲಾಯಿಸಿದ್ದು, ಇದರಿಂದ ಮುಂಬರುವ ನೀತಿಗಳಲ್ಲಿ ಕಡಿತವಾಗುವ ಸಾಧ್ಯತೆಯಿದೆ.

ಕಳೆದ ತಿಂಗಳು ಯುಎಸ್ ಫೆಡರಲ್ ರಿಸರ್ವ್ ವಿತ್ತೀಯ ನೀತಿ ದರಗಳನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಇಳಿಸಿದ್ದರೂ ಆರ್‌ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ. ಕೆಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಕೇಂದ್ರ ಬ್ಯಾಂಕ್‌ಗಳು ಸಹ ತಮ್ಮ ಬಡ್ಡಿದರಗಳನ್ನು ಕಡಿಮೆ ಮಾಡಿವೆ.

ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MCC) ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ.

ಕಳೆದ ವರ್ಷ ಫೆಬ್ರವರಿಯಿಂದ ವಿತ್ತೀಯ ನೀತಿಯಲ್ಲಿ ಬಡ್ಡಿ ದರದಲ್ಲಿ ಆರ್ ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದ ಜಿಡಿಪಿ ಬೆಳವಣಿಗೆ ಬಲವಾಗಿದ್ದಾಗಲೂ ಆರ್‌ಬಿಐ ಹೆಚ್ಚಿದ ಆಹಾರ ಹಣದುಬ್ಬರವನ್ನು ಕಾಣುತ್ತದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.

ಪುನರ್ರಚಿಸಲಾದ ಎಂಪಿಸಿಯ ಮೊದಲ ಸಭೆ ಇದಾಗಿದೆ. ಹೊಸದಾಗಿ ನೇಮಕಗೊಂಡ ಮೂವರು ಬಾಹ್ಯ ಸದಸ್ಯರು ರಾಮ್ ಸಿಂಗ್, ಸೌಗತ ಭಟ್ಟಾಚಾರ್ಯ ಮತ್ತು ನಾಗೇಶ್ ಕುಮಾರ್ ಆಗಿದ್ದಾರೆ. ಎಂಪಿಸಿಯನ್ನು ಸರಕಾರ ಕಳೆದ ತಿಂಗಳು ಪುನರ್ರಚನೆ ಮಾಡಿತ್ತು.

ರೆಪೊ ದರ (Repo rate): ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ (Reverse repo rate): ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT