ನಿತಿನ್ ಗಡ್ಕರಿ online desk
ವಾಣಿಜ್ಯ

ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಇನ್ನು ಮುಂದೆ ಸರ್ಕಾರದ ಸಬ್ಸಿಡಿ ಅಗತ್ಯವಿಲ್ಲ: ಗಡ್ಕರಿ

ಆರಂಭದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ವೆಚ್ಚಗಳು ಹೆಚ್ಚಾಗಿತ್ತು. ಆದರೆ ಬೇಡಿಕೆ ಕಡಿಮೆ ಇತ್ತು. ಈಗ ಗ್ರಾಹಕರು ಇವಿ ಅಥವಾ ಸಿಎನ್‌ಜಿ ವಾಹನಗಳನ್ನು ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದಾರೆ.

ನವದೆಹಲಿ: ಎಲೆಕ್ಟ್ರಿಕ್ ವಾಹನಗಳ(ಇವಿ) ತಯಾರಕರಿಗೆ ಇನ್ನು ಮುಂದೆ ಸಬ್ಸಿಡಿ ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಹೇಳಿದ್ದಾರೆ. ಹೀಗಾಗಿ ಇವಿ ವಾಹನಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಇಂದು ಬಿಎನ್‌ಇಎಫ್ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಆರಂಭದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ವೆಚ್ಚಗಳು ಹೆಚ್ಚಾಗಿತ್ತು. ಆದರೆ ಬೇಡಿಕೆ ಕಡಿಮೆ ಇತ್ತು. ಈಗ ಗ್ರಾಹಕರು ಇವಿ ಅಥವಾ ಸಿಎನ್‌ಜಿ ವಾಹನಗಳನ್ನು ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದಾರೆ. ಬೇಡಿಕೆ ಹೆಚ್ಚಾದಂತೆ ಉತ್ಪಾದನಾ ವೆಚ್ಚಗಳು ಕಡಿಮೆಯಾಗಿದೆ. ಇದರಿಂದಾಗಿ ಹೆಚ್ಚಿನ ಸಬ್ಸಿಡಿ ಅಗತ್ಯ ಇಲ್ಲ ಎಂದಿದ್ದಾರೆ.

"ಗ್ರಾಹಕರು ಈಗ ಎಲೆಕ್ಟ್ರಿಕ್ ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(ಸಿಎನ್‌ಜಿ) ವಾಹನಗಳನ್ನು ತಾವಾಗಿಯೇ ಆಯ್ಕೆ ಮಾಡುತ್ತಿದ್ದಾರೆ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಾವು ಹೆಚ್ಚಿನ ಸಬ್ಸಿಡಿಯನ್ನು ನೀಡುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಗಡ್ಕರಿ ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿ ಕಡಿಮೆಯಾಗಿದೆ. ನನ್ನ ಅಭಿಪ್ರಾಯದಲ್ಲಿ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಇನ್ನು ಮುಂದೆ ಸರ್ಕಾರದಿಂದ ಸಬ್ಸಿಡಿ ಅಗತ್ಯವಿಲ್ಲ ಮತ್ತು ಸಬ್ಸಿಡಿ ಕೇಳುವುದು ಇನ್ನು ಮುಂದೆ ಸಮರ್ಥನೀಯವಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ, ಹೈಬ್ರಿಡ್ ಸೇರಿದಂತೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಶೇ. 28 ರಷ್ಟು ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಶೇ. 5 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT