ಭಾರತೀಯ ಷೇರುಮಾರುಕಟ್ಟೆ 
ವಾಣಿಜ್ಯ

Indian Stock Market: ದಾಖಲೆಯ 85 ಸಾವಿರ ಗಡಿ ದಾಟಿ ಅಲ್ಪ ಇಳಿಕೆ ಕಂಡ ಸೆನ್ಸೆಕ್ಸ್, ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದು ವಹಿವಾಟು ಆರಂಭವಾಗುತ್ತಿದ್ದಂತೆಯೇ 234.62 ಅಂಕಗಳ ಏರಿಕೆಯೊಂದಿಗೆ ಸೆನ್ಸೆಕ್ಸ್ 85 ಸಾವಿರ ಗಡಿ ದಾಟಿತ್ತು.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಇಳಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ್ದು, ದಾಖಲೆಯ 85 ಸಾವಿರ ಗಡಿ ದಾಟಿದ್ದ ಸೆನ್ಸೆಕ್ಸ್ 14.57 ಅಂಕಗಳ ಕುಸಿತದೊಂದಿಗೆ 84,914.04 ಅಂಶಗಳಿಗೆ ಕುಸಿದು ಇಂದು ವಹಿವಾಟು ಅಂತ್ಯಗೊಳಿಸಿದೆ.

ಇಂದು ವಹಿವಾಟು ಆರಂಭವಾಗುತ್ತಿದ್ದಂತೆಯೇ 234.62 ಅಂಕಗಳ ಏರಿಕೆಯೊಂದಿಗೆ ಸೆನ್ಸೆಕ್ಸ್ 85 ಸಾವಿರ ಗಡಿ ದಾಟಿತ್ತು. ಆ ಮೂಲಕ 85,163.23. ಅಂಕಗಳಿಗೆ ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿತ್ತು. ಆದರೆ ದಿನದ ವಹಿವಾಟು ಅಂತ್ಯದ ವೇಳೆಗೆ 84,914.04 ಅಂಕಗಳಿಗೆ ಕುಸಿದು ವಹಿವಾಟು ಅಂತ್ಯಗೊಳಿಸಿದೆ.

ಇದಕ್ಕೆ ವ್ಯತಿರಿಕ್ತ ಎಂಬಂತೆ ಇಂದು ನಿಫ್ಟಿ ಅಲ್ಪ ಏರಿಕೆ ಕಂಡಿದ್ದು, ಆರಂಭಿಕ ವಹಿವಾಟಿನಲ್ಲಿ 72.5 ಅಂಕಗಳ ಏರಿಕೆಯೊಂದಿಗೆ 26,011.55. ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿತ್ತು. ಬಳಿಕ 25,940.40 ಅಂಕಗಳಿಗೆ ಕುಸಿದು ಕೇವಲ 1.35 ಅಂಕಗಳು ಮಾತ್ರ ಏರಿಕೆ ಕಂಡು ವಹಿವಾಟು ಅಂತ್ಯಗೊಳಿಸಿದೆ.

ಚೀನಾ ಹೊರತಂದಿರುವ ವಿತ್ತೀಯ ನೀತಿಗಳು ಇಂದಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದ್ದು, ಪ್ರಮುಖವಾಗಿ ಅದರ ಮೆಟಲ್ ಇಂಡಸ್ಟ್ರಿ ಮಾರುಕಟ್ಟೆ ಮತ್ತು ಷೇರುಗಳ ಮೌಲ್ಯ ಏರಿಕೆಯಾಗುವಂತೆ ಮಾಡಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ FMCG ಮತ್ತು ಬ್ಯಾಂಕಿಂಗ್ ವಿಭಾಗದ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡುಬಂದಿದ್ದು, ಇಂಧನ ಮತ್ತು ಮೆಟಲ್ ವಿಭಾಗದ ಶೇರುಗಳ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ.

ಉಳಿದಂತೆ ಟಾಟಾ ಸ್ಟೀಲ್, ಹಿಂಡಾಲ್ಕೊ ಇಂಡಸ್ಟ್ರೀಸ್, ಪವರ್ ಗ್ರಿಡ್ ಕಾರ್ಪ್, ಟೆಕ್ ಮಹೀಂದ್ರಾ ಮತ್ತು ಅದಾನಿ ಎಂಟರ್‌ಪ್ರೈಸಸ್ ಸಂಸ್ಥೆಗಳ ಷೇರುಗಳ ಲಾಭಾಂಶ ಕಂಡರೆ, SBI ಲೈಫ್ ಇನ್ಶುರೆನ್ಸ್, HUL, ಗ್ರಾಸಿಮ್ ಇಂಡಸ್ಟ್ರೀಸ್, ಅಲ್ಟ್ರಾಟೆಕ್ ಸಿಮೆಂಟ್, ಹಿಂದೂಸ್ತಾನ್ ಯೂನಿಲಿವರ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್‌ ಮತ್ತು ಶ್ರೀರಾಮ್ ಫೈನಾನ್ಸ್ ಸಂಸ್ಥೆಗಳ ಷೇರುಗಳ ಮೌಲ್ಯ ಕುಸಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!