ವಾಣಿಜ್ಯ

ಪಹಲ್ಗಾಮ್ ಉಗ್ರ ದಾಳಿಯ ಸಂತ್ರಸ್ತರ ನೆರವಿಗೆ ನಿಂತ NSE: ಕುಟುಂಬಗಳಿಗೆ ಒಟ್ಟು 1 ಕೋಟಿ ರೂ ಘೋಷಣೆ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 2025ರ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರಿಗೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್‌ಎಸ್‌ಇ) ಸಂತಾಪ ಸೂಚಿಸಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 2025ರ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರಿಗೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್‌ಎಸ್‌ಇ) ಸಂತಾಪ ಸೂಚಿಸಿದೆ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಹಾಯ ಮಾಡಲು NSE ಒಟ್ಟು 1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೆ 4 ಲಕ್ಷ ರೂ. ನೀಡಲಾಗುವುದು. ಈ ನಿರ್ಧಾರದ ಮೂಲಕ, ಈ ಕಷ್ಟದ ಸಮಯದಲ್ಲಿ ಇಡೀ ದೇಶದೊಂದಿಗೆ ನಿಲ್ಲುವ ಸಂದೇಶವನ್ನು NSE ನೀಡಿದೆ.

ಈ ಕಷ್ಟದ ಸಮಯದಲ್ಲಿ ಬಲಿಪಶುಗಳ ಕುಟುಂಬಗಳೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು NSE ವ್ಯವಸ್ಥಾಪಕ ನಿರ್ದೇಶಕ (MD) ಮತ್ತು CEO ಆಶಿಶ್ ಚೌಹಾಣ್ ಹೇಳಿದ್ದಾರೆ. ಇದು ನಮ್ಮ ದೇಶಕ್ಕೆ ಸಾಮೂಹಿಕ ದುಃಖದ ಸಮಯ. ಸಂತ್ರಸ್ತ ಕುಟುಂಬಗಳೊಂದಿಗೆ ನಮ್ಮ ಸಂತಾಪ ಮತ್ತು ಪ್ರಾರ್ಥನೆಗಳು ಇವೆ. ಅವರಿಗೆ ಸಹಾಯ ಮಾಡಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ ಆಶಿಶ್ ಕುಮಾರ್ ಚೌಹಾಣ್ ಹೇಳಿದರು.

ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿರುವ ಅವರು, 2025ರ ಏಪ್ರಿಲ್ 22ರಂದು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, ಘಟನೆಯಿಂದ ನಾವು ತುಂಬಾ ದುಃಖಿತರಾಗಿದ್ದೇವೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಒಗ್ಗಟ್ಟಿನಿಂದ, NSE ಬಲಿಪಶುಗಳ ಕುಟುಂಬಗಳಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

ಈ ಹಿಂದೆ, ಭಾರತೀಯ ಜೀವ ವಿಮಾ ನಿಗಮವು ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ಸಹಾಯ ಮಾಡಲು ಸಿದ್ಧವಾಗಿದೆ ಮತ್ತು ಆರ್ಥಿಕ ಪರಿಹಾರವನ್ನು ಒದಗಿಸಲು ಕ್ಲೇಮ್‌ಗಳ ಇತ್ಯರ್ಥವನ್ನು ತ್ವರಿತಗೊಳಿಸುವುದಾಗಿ ಘೋಷಿಸಿತ್ತು. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಮಾಯಕ ನಾಗರಿಕರ ಸಾವಿಗೆ ಭಾರತೀಯ ಜೀವ ವಿಮಾ ನಿಗಮ ತೀವ್ರ ದುಃಖ ವ್ಯಕ್ತಪಡಿಸುತ್ತದೆ" ಎಂದು ಎಲ್‌ಐಸಿ ಹೇಳಿಕೆಯಲ್ಲಿ ತಿಳಿಸಿದೆ.

ಮರಣ ಪ್ರಮಾಣಪತ್ರ ಪತ್ರದ ಬದಲಾಗಿ, ಭಯೋತ್ಪಾದಕ ದಾಳಿಯಿಂದ ಪಾಲಿಸಿದಾರನ ಮರಣದ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿರುವ ಯಾವುದೇ ಪುರಾವೆಗಳನ್ನು ಸಾವಿನ ಪುರಾವೆಯಾಗಿ ಸ್ವೀಕರಿಸಲಾಗುತ್ತದೆ ಎಂದು ಎಲ್ಐಸಿ ಹೇಳಿಕೆ ತಿಳಿಸಿದೆ. ಇದಲ್ಲದೆ, ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಪಾವತಿಸುವ ಯಾವುದೇ ಪರಿಹಾರವನ್ನು ಸಾವಿನ ಪುರಾವೆಯಾಗಿ ಪರಿಗಣಿಸಲಾಗುತ್ತದೆ ಎಂದು ಎಲ್ಐಸಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT