ಭಾರತೀಯ ಷೇರು ಮಾರುಕಟ್ಟೆ 
ವಾಣಿಜ್ಯ

Indian Stock Market: ಪುಟಿದೆದ್ದ ಮಾರುಕಟ್ಟೆ, Sensex ಭಾರಿ ಏರಿಕೆ; 24,500 ಸಾವಿರ ಅಂಕ ಗಡಿ ದಾಟಿದ Nifty50

ಸೋಮವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ಸತತವಾಗಿ ಕುಸಿದಿದ್ದ ಭಾರತೀಯ ಷೇರುಮಾರುಕಟ್ಟೆ ಸೋಮವಾರ ಭರ್ಜರಿಯಾಗಿ ಪುಟಿದೆದ್ದಿದ್ದು, ಸೆನ್ಸೆಕ್ಸ್ 750 ಅಂಕಗಳಿಗೂ ಹೆಚ್ಚು ಏರಿಕೆ ಕಂಡಿದೆ.

ಸೋಮವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.93ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.91ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 746.29ಅಂಕಗಳ ಏರಿಕೆಯೊಂದಿಗೆ 80,604.08 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 221.75 ಅಂಕಗಳ ಏರಿಕೆಯೊಂದಿಗೆ 24,585.05 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಇಂಧನ, ಆಟೋ ಮತ್ತು ಬ್ಯಾಂಕಿಂಗ್ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟಾಟಾ ಮೋಟಾರ್ಸ್, ಎಟರ್ನಲ್, ಅದಾನಿ ಪೋರ್ಟ್ಸ್, ಟ್ರೆಂಟ್, ಎಸ್‌ಬಿಐ, ಎಲ್ & ಟಿ, ಮಹೀಂದ್ರಾ & ಮಹೀಂದ್ರಾ, ಆಕ್ಸಿಸ್ ಬ್ಯಾಂಕ್, ಸನ್ ಫಾರ್ಮಾ, ಎಚ್‌ಡಿಎಫ್‌ಸಿ ಬ್ಯಾಂಕ್, ಎಚ್‌ಸಿಎಲ್ ಟೆಕ್, ಮತ್ತು ಕೋಟಕ್ ಬ್ಯಾಂಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಭಾರ್ತಿ ಏರ್‌ಟೆಲ್, ಬಿಇಎಲ್ ಮತ್ತು ಐಸಿಐಸಿಐ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್