ಮುಂಬೈ: ಸತತವಾಗಿ ಏರಿಕೆಯಾಗಿದ್ದ ಭಾರತೀಯ ಷೇರುಮಾರುಕಟ್ಟೆ ಶುಕ್ರವಾರ ಭಾರಿ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ವಾರದ ಅಂತಿಮ ದಿನವಾದ ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ0.85ರಷ್ಟು ಕುಸಿತ ಕಂಡಿದ್ದರೆ, ನಿಫ್ಟಿ ಕೂಡ ಶೇ.0.85ರಷ್ಟು ಕುಸಿತ ದಾಖಲಿಸಿದೆ.
ಸೆನ್ಸೆಕ್ಸ್ ಇಂದು ಬರೊಬ್ಬರಿ 693.86ಅಂಕಗಳ ಏರಿಕೆಯೊಂದಿಗೆ 81,306.85 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 213.65 ಅಂಕಗಳ ಇಳಿಕೆಯೊಂದಿಗೆ 24,870.10 ಅಂಕಗಳಿಗೆ ಕುಸಿತವಾಗಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಮಾಧ್ಯಮ ವಲಯದ ಷೇರುಗಳ ಮೌಲ್ಯ 1% ಏರಿಕೆ ಕಂಡರೆ, ಔಷಧ ವಲಯದ ಷೇರುಗಳ ಮೌಲ್ಯ ಕೂಡ 0.4% ಏರಿಕೆ ಕಂಡಿದೆ. ಉಳಿದಂತೆ ಲೋಹ, ಐಟಿ, ಎಫ್‌ಎಂಸಿಜಿ, ತೈಲ ಮತ್ತು ಅನಿಲ, ಪಿಎಸ್‌ಯು ಬ್ಯಾಂಕ್, ಖಾಸಗಿ ಬ್ಯಾಂಕ್, ರಿಯಾಲ್ಟಿ ಕ್ಷೇತ್ರದ ಷೇರುಗಳ ಮೌಲ್ಯ 0.5ರಿಂದ ಶೇ.1% ರಷ್ಟು ಕುಸಿತ ಕಂಡಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಮಹೀಂದ್ರಾ & ಮಹೀಂದ್ರಾ, ಮಾರುತಿ, ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಸನ್ ಫಾರ್ಮಾ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಅಂತೆಯೇ ಏಷ್ಯನ್ ಪೇಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಐಟಿಸಿ, ಎಚ್‌ಸಿಎಲ್ ಟೆಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಅದಾನಿ ಪೋರ್ಟ್ಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಟೆಕ್ ಮಹೀಂದ್ರಾ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.