ನವದೆಹಲಿ: ಕೇಂದ್ರ ಸರ್ಕಾರ ಸುರಕ್ಷತೆಯ ಕಾರಣಗಳಿಂದಾಗಿ ಜನಪ್ರಿಯ ನೋವು ನಿವಾರಕ ಮಾತ್ರೆ ನಿಮೆಸುಲೈಡ್ ತಯಾರಿಕೆ, ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
100 ಮಿಗ್ರಾಂಗಿಂತ ಹೆಚ್ಚಿನ ಪ್ರಮಾಣವನ್ನು ಹೊಂದಿರುವ ಈ ನೋವು ನಿವಾರಕದ ನಿಮೆಸುಲೈಡ್ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ಡಿಸೆಂಬರ್ 29 ರಂದು ಹೊರಡಿಸಲಾದ ಅಧಿಸೂಚನೆ ಪ್ರಕಾರ, ಔಷಧಿ ತಾಂತ್ರಿಕ ಸಲಹಾ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿದ ನಂತರ ಔಷಧಿಗಳು ಮತ್ತು ಸೌಂದರ್ಯವರ್ಧಕಗಳ ಕಾಯ್ದೆ 1940ರ ಸೆಕ್ಷೆನ್ 26ಎ ಅಡಿಯಲ್ಲಿ ಈ ನಿಷೇಧವು ತಕ್ಷಣದಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.