ನಿರ್ಮಲಾ ಸೀತಾರಾಮನ್, ಬಾಲಕೃಷ್ಣ ಸಾಂದರ್ಭಿಕ ಚಿತ್ರ 
ವಾಣಿಜ್ಯ

ಕೇಂದ್ರ ಬಜೆಟ್ 2025: ಹಲವು ಬೇಡಿಕೆಗಳ ಈಡೇರಿಕೆ; FKCCI ಸ್ವಾಗತ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSME) ಮತ್ತು ಉತ್ಪಾದನಾ ವಲಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ.

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸ್ವಾಗತಿಸಿದೆ. ಅತ್ಯುತ್ತಮ ಬಜೆಟ್ ಇದಾಗಿದ್ದು, ಆದಾಯದ ಮೂಲದಲ್ಲಿ ತೆರಿಗೆ ಸಂಗ್ರಹವನ್ನು ತೆಗೆದುಹಾಕುವ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಎಂ ಜಿ ಬಾಲಕೃಷ್ಣ ಹೇಳಿದ್ದಾರೆ.

"ಬಜೆಟ್ ತುಂಬಾ ಚೆನ್ನಾಗಿದೆ. ಆದಾಯದ ಮೂಲದಲ್ಲಿ ತೆರಿಗೆ ಕಡಿತ (ಟಿಡಿಎಸ್) ಮತ್ತು ತೆರಿಗೆ ಸಂಗ್ರಹ (ಟಿಸಿಎಸ್) ದಂತಹ ಕೆಲವು ನಿರ್ದಿಷ್ಟ ಬೇಡಿಕೆಗಳನ್ನು ಸಲ್ಲಿಸಿದ್ದೇವು. ಸರ್ಕಾರ ಅದನ್ನು ಪರಿಗಣಿಸಿದೆ ಎಂದು ಬಾಲಕೃಷ್ಣ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಬಜೆಟ್ ನಲ್ಲಿ ವಾರ್ಷಿಕ 12 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡುವ ಮೂಲಕ ಮಧ್ಯಮ ವರ್ಗದವರಿಗೆ ಅನುಕೂಲಕರವಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSME) ಮತ್ತು ಉತ್ಪಾದನಾ ವಲಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ವಹಿವಾಟು ಮತ್ತು ಹೂಡಿಕೆಯನ್ನು ಕೇಂದ್ರ ಬಜೆಟ್ ಮರು ವ್ಯಾಖ್ಯಾನಿಸಿದೆ. ವಿವಿಧ ಕೈಗಾರಿಕೆಗಳು ಆಮದು ಮಾಡಿಕೊಳ್ಳುವ ಕೆಲವು ವಸ್ತುಗಳು ಮತ್ತು ಕೆಲವು ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಾಗಿದೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಉತ್ಪಾದನಾ ವಲಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ಇದು ಉತ್ತಮ ಕೊಡುಗೆ ನೀಡಿದೆ. ಸಾಲ ಮತ್ತು ಉಪಕರಣಗಳಿಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಕೃಷಿಗೂ ಪ್ರಾಮುಖ್ಯತೆ ನೀಡಲಾಗಿದೆ ಎಂದು ಎಫ್‌ಕೆಸಿಸಿಐ ಮುಖ್ಯಸ್ಥರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT