ಪ್ರಾತಿನಿಧಿಕ ಚಿತ್ರ 
ವಾಣಿಜ್ಯ

Invest Karnataka 2025: ಹೊಸಕೋಟೆಯಲ್ಲಿನ ವೋಲ್ವೋ ಉತ್ಪಾದನಾ ಘಟಕ ವಿಸ್ತರಣೆ; ₹1,400 ಕೋಟಿ ಹೂಡಿಕೆ

ಈ ಸಂಬಂಧ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಬೆಂಗಳೂರು: ಸ್ವೀಡನ್ ಮೂಲದ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರುವಾಸಿಯಾದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ಉತ್ಪಾದನಾ ಘಟಕವನ್ನು ವಿಸ್ತರಿಸಲು ನಿರ್ಧರಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಗುರವಾರ ಘೋಷಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 25 ವರ್ಷಗಳ ಹಿಂದೆ ವೋಲ್ವೋ ರಾಜ್ಯಕ್ಕೆ ಬಂದು ಬಂಡವಾಳ ಹೂಡಿಕೆ ಮಾಡಿತು ಮತ್ತು ಬದಲಾವಣೆಯನ್ನು ಆರಂಭಿಸಿತು. ಈಗ ವೋಲ್ವೋ ದೇಶದಲ್ಲಿ ಉತ್ತಮ ಗುಣಮಟ್ಟದ ಬಸ್‌ಗಳಿಗೆ ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ ಎಂದರು.

ಸರ್ಕಾರವು ವೋಲ್ವೋ ಕಂಪನಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯ ಮತ್ತು ನೆರವು ನೀಡಲಾಗುತ್ತದೆ. ಇದಕ್ಕೆ ಪ್ರತಿಯಾಗಿ ಕಂಪನಿಯು ಹೆಚ್ಚಿನ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

ವೋಲ್ವೋ ಸಿಇಒ ಮಾರ್ಟಿನ್ ಲುಂಡ್‌ಸ್ಟೆಡ್ ಮಾತನಾಡಿ, ಕಂಪನಿಯು ಕರ್ನಾಟಕದ ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತನ್ನ ಉತ್ಪಾದನಾ ಘಟಕಗಳನ್ನು ಹೊಂದಿದೆ. ಈ ಮೂರು ಘಟಕಗಳಲ್ಲಿ ನಾವು ವರ್ಷಕ್ಕೆ ಮೂರು ಸಾವಿರ ಬಸ್‌ಗಳು ಮತ್ತು ಟ್ರಕ್‌ಗಳನ್ನು ಉತ್ಪಾದಿಸುತ್ತಿದ್ದೇವೆ. ಹೊಸಕೋಟೆ ಘಟಕದ ವಿಸ್ತರಣೆ ಮೂಲಕ ವರ್ಷಕ್ಕೆ 20,000 ಬಸ್‌ಗಳು ಮತ್ತು ಟ್ರಕ್‌ಗಳನ್ನು ತಯಾರಿಸಬಹುದು. ಇದು ಉದ್ಯೋಗ ಸೃಷ್ಟಿಗೆ ನೆರವಾಗುತ್ತದೆ. ಇದಲ್ಲದೆ, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ. ಜೊತೆಗೆ, ಸ್ಥಳೀಯ ಮಾರುಕಟ್ಟೆಯ ಅಗತ್ಯಗಳನ್ನು ಪೂರೈಸಲು ಸುಗಮವಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವದ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ವೋಲ್ವೋದ ನಾಲ್ಕನೇ ಅತಿದೊಡ್ಡ ಉತ್ಪಾದನಾ ಸ್ಥಳವಾಗಿದೆ. ಇಲ್ಲಿನ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗಿದೆ. ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಕಂಪನಿಯು ಮಧ್ಯಪ್ರದೇಶದಲ್ಲಿ ಜಂಟಿ ಸಹಭಾಗಿತ್ವವನ್ನು ಹೊಂದಿದೆ. ಕಂಪನಿಯ ವಹಿವಾಟು ಈಗ ವಾರ್ಷಿಕ 50 ಶತಕೋಟಿ ಡಾಲರ್ ದಾಟಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

Video: 'ಪ್ರಾಕ್ಟಿಸ್ ಮಾಡೋಕ್ ಬಿಡ್ರೋ..': ಕ್ಯಾಮೆರಾಮನ್ ವಿರುದ್ಧ Smriti Mandhana ಅಸಮಾಧಾನ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

SCROLL FOR NEXT