ಇನ್ಫೋಸಿಸ್ 
ವಾಣಿಜ್ಯ

Infosys ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ.

ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ. ಐಟಿ ನೌಕರರ ಕಲ್ಯಾಣ ಸಂಘವಾದ ಎನ್‌ಐಟಿಇಎಸ್‌ ದೂರಿನ ಮೇರೆಗೆ ಈ ಸೂಚನೆಯನ್ನು ನೀಡಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಾಮೂಹಿಕ ವಜಾ ವಿಚಾರದಲ್ಲಿ ಕರ್ನಾಟಕ ಮಧ್ಯಪ್ರವೇಶಿಸಿ ವಿವಾದವನ್ನು ಪರಿಹರಿಸಬೇಕು ನಿರ್ದೇಶನ ನೀಡಿದೆ. ಅಲ್ಲದೆ ದೂರುದಾರರಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಕಳೆದ ಶುಕ್ರವಾರ ತರಬೇತಿ ಪಡೆದ ಸುಮಾರು 400 ನೌಕರರನ್ನು ಇನ್ಫೋಸಿಸ್ ವಜಾಗೊಳಿಸಿದೆ. ಈ ವಜಾಗೊಳಿಸುವಿಕೆಯನ್ನು 'ಅಕ್ರಮ, ಅನೈತಿಕ' ಎಂದು ಜರೆದಿರುವ ಎನ್‌ಐಟಿಇಎಸ್‌, ಇದು 'ಕಾರ್ಮಿಕ ಕಾನೂನುಗಳ ಉಲ್ಲಂಘನೆ' ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!