ನವದೆಹಲಿ: ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ಬೆಲೆ ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರವು 723 ರೂಪಾಯಿ ಕಡಿಮೆಯಾಗಿದೆ.
ಫ್ಯೂಚರ್ಸ್ ವಹಿವಾಟಿನಲ್ಲಿ 10 ಗ್ರಾಂಗೆ 723 ರೂಪಾಯಿ ಅಥವಾ ಶೇ 0.84ರಷ್ಟು ಕುಸಿತ ಕಂಡಿದ್ದು, 85,151 ರೂಪಾಯಿಗೆ ತಲುಪಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿದ್ದು, ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 8,010 ರೂಪಾಯಿಗೆ ಮಾರಾಟವಾಗುತ್ತಿದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 8,738 ರೂಪಾಯಿ ಇದೆ. 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನಕ್ಕೆ 6,554 ರೂಪಾಯಿ ಇದೆ.
ಬೆಳ್ಳಿ ಬೆಲೆಯಲ್ಲೂ ಇಳಿಕೆ
ಗುರುವಾರ ಪ್ರತಿ ಕಿಲೋಗ್ರಾಂ ಬೆಳ್ಳಿಗೆ 540 ರೂಪಾಯಿ ಕಡಿಮೆಯಾಗಿದ್ದು, 94,101 ರೂ.ಗೆ ಮಾರಾಟವಾಗಿದೆ.