ಸಾಂದರ್ಭಿಕ ಚಿತ್ರ 
ವಾಣಿಜ್ಯ

JOBS: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಈ ವರ್ಷ 50,000 ಹುದ್ದೆಗಳ ನೇಮಕಾತಿ!

ವಿವಿಧ ಬ್ಯಾಂಕ್‌ಗಳಿಂದ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಒಟ್ಟು ಹೊಸ ನೇಮಕಾತಿಯಲ್ಲಿ ಸುಮಾರು 21,000 ಅಧಿಕಾರಿ ಹುದ್ದೆಗಳಾಗಿದ್ದರೆ, ಉಳಿದವು ಗುಮಾಸ್ತ ಸೇರಿದಂತೆ ಇತರ ಹುದ್ದೆಗಳಾಗಿವೆ.

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಹೆಚ್ಚುತ್ತಿರುವ ವ್ಯವಹಾರದ ಅಗತ್ಯತೆ ಮತ್ತು ವಿಸ್ತರಣೆ ಪೂರೈಸಲು ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 50,000 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿವೆ.

ವಿವಿಧ ಬ್ಯಾಂಕ್‌ಗಳಿಂದ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಒಟ್ಟು ಹೊಸ ನೇಮಕಾತಿಯಲ್ಲಿ ಸುಮಾರು 21,000 ಅಧಿಕಾರಿ ಹುದ್ದೆಗಳಾಗಿದ್ದರೆ, ಉಳಿದವು ಗುಮಾಸ್ತ ಸೇರಿದಂತೆ ಇತರ ಹುದ್ದೆಗಳಾಗಿವೆ.

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಅತಿದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಈ ಹಣಕಾಸು ವರ್ಷದಲ್ಲಿ ವಿಶೇಷ ಅಧಿಕಾರಿಗಳು (specialised officers) ಸೇರಿದಂತೆ ಸುಮಾರು 20,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ.

ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ಎಸ್ ಬಿಐ, ದೇಶಾದ್ಯಂತ ತನ್ನ ಶಾಖೆಗಳಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳು (POs)ಮತ್ತು 13,455 junior associates ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ.

35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ 13,455 ಜೂನಿಯರ್ ಅಸೋಸಿಯೇಟ್‌ಗಳ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಮಾರ್ಚ್ 2025 ರ ಹೊತ್ತಿಗೆ SBI ಬ್ಯಾಂಕ್ ನ ಒಟ್ಟು ಸಿಬ್ಬಂದಿ ಸಾಮರ್ಥ್ಯ 2,36,226 ರಷ್ಟಿತ್ತು. 2024-25 ರಲ್ಲಿ ಪೂರ್ಣಕಾಲಿಕ ಉದ್ಯೋಗಿಗೆ ಸರಾಸರಿ ನೇಮಕಾತಿ ವೆಚ್ಚ 40,440.59 ರೂ. ಆಗಿತ್ತು.

ದೇಶದ ಎರಡನೇ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಪ್ರಸಕ್ತ ಹಣಕಾಸು ವರ್ಷದಲ್ಲಿ 5,500 ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿದೆ. ಮಾರ್ಚ್ 2025 ರ ಹೊತ್ತಿಗೆ PNBಯಲ್ಲಿ ಒಟ್ಟು 1,02,746 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.

ಮತ್ತೊಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 4,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಯೋಜಿಸಿದೆ

ಸಾರ್ವಜನಿಕ ವಲಯದ ಬ್ಯಾಂಕ್ ಗಳ ಸುಮಾರು 15 ಅಂಗಸಂಸ್ಥೆಗಳು ಅಥವಾ ಜಂಟಿ ಉದ್ಯಮಗಳು ಆರಂಭಿಕ ಸಾರ್ವಜನಿಕ ಕೊಡುಗೆಗಳು ಅಥವಾ ಮಧ್ಯಮದಿಂದ ದೀರ್ಘಾವಧಿಯಲ್ಲಿ ಬಂಡವಾಳ ವಿನಿಯೋಗಿಸಲು ಸಾಲಾಗಿ ನಿಂತಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT