ಮುಂಬೈ: ಸತತ 4ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಕುಸಿತ ಕಂಡಿದ್ದು, ವಾರದ ಮೊದಲ ದಿನವಾದ ಸೋಮವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಭಾರತೀಯ ಷೇರುಮಾರುಕಟ್ಟೆ ಅಲ್ಪ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.30ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.27ರಷ್ಟು ಕುಸಿತ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 247.01ಅಂಕಗಳ ಏರಿಕೆಯೊಂದಿಗೆ 82,253.46 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 67.55 ಅಂಕಗಳ ಏರಿಕೆಯೊಂದಿಗೆ 25,082.30 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಕಳೆದ 4 ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಬರೊಬ್ಬರಿ 1459 ಅಂಕಗಳ ಕಳೆದುಕೊಂಡಿದೆ. ಇಂದಿನ ವಹಿವಾಟಿನಲ್ಲಿ ಐಟಿ, ವಿದೇಶಿ ವಲಯದ ಷೇರುಗಳು ಹೆಚ್ಚಿನ ಮಾರಾಟ ಕಂಡಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಏಷ್ಯನ್ ಪೇಂಟ್ಸ್, ಟೆಕ್ ಮಹೀಂದ್ರ, ಬಜಾಜ್ ಫೈನಾನ್ಸ್, ಇನ್ಫೋಸಿಸ್, ಹೆಚ್ ಸಿಎಲ್ ಟೆಕ್, ಟಿಸಿಎಸ್, ಎಲ್ ಅಂಡ್ ಟಿ, ಟಾಟಾ ಮೋಟರ್ಸ್, ಬಜಾಜ್ ಫೈನಾನ್ಸ್, ಕೋಟಕ್ ಬ್ಯಾಂಕ್ ಸಂಸ್ಥೆಯ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡಿವೆ.