ಮುಂಬೈ: ಭಾರತದ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, 2026ರ ಹಣಕಾಸು ವರ್ಷದಲ್ಲಿ ಶೇಕಡಾ 2 ರಷ್ಟು ಉದ್ಯೋಗ ಕಡಿತ ಮಾಡಲು ಯೋಜಿಸುತ್ತಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಪ್ರಾಥಮಿಕವಾಗಿ, ಮಧ್ಯಮ ಮತ್ತು ಹಿರಿಯ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಈ ಕಡಿತವು ಕಂಪನಿಯ ಪ್ರಸ್ತುತ 613,000ಕ್ಕೂ ಹೆಚ್ಚು ಉದ್ಯೋಗಿಗಳ ಪೈಕಿ ಸುಮಾರು 12,200 ಜನ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
ಟಿಸಿಎಸ್ ಕೃತಕ ಬುದ್ಧಿಮತ್ತೆ ಮತ್ತು ಇತರ ಸುಧಾರಿತ ತಂತ್ರಜ್ಞಾನಗಳ ನಿಯೋಜನೆಯನ್ನು ವೇಗಗೊಳಿಸುತ್ತಿದೆ. ಅಲ್ಲದೆ ಹೊಸ ಮಾರುಕಟ್ಟೆಗಳಿಗೆ ಪ್ರವೇಶಿಸುವುದರಿಂದ ಮತ್ತು ಅನಿಶ್ಚಿತ ಜಾಗತಿಕ ಬೇಡಿಕೆಯ ದೃಷ್ಟಿಕೋನವನ್ನು ನ್ಯಾವಿಗೇಟ್ ಮಾಡುತ್ತಿರುವುದರಿಂದ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವರದಿ ತಿಳಿಸಿದೆ.
"ನಮ್ಮ ಗ್ರಾಹಕರಿಗೆ ಸೇವಾ ವಿತರಣೆಯ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ" ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.