Indian Stock Market: ಸತತ 2ನೇ ದಿನವೂ ಏರಿಕೆ, 25 ಸಾವಿರ ಗಡಿ ದಾಟಿದ Nifty50
ಸೆನ್ಸೆಕ್ಸ್ ಇಂದು ಬರೊಬ್ಬರಿ 700.40ಅಂಕಗಳ ಏರಿಕೆಯೊಂದಿಗೆ 82,755.51 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 200.40 ಅಂಕಗಳ ಏರಿಕೆಯೊಂದಿಗೆ 25,244.75 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಮುಂಬೈ: ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಏರಿಕೆ ಕಂಡಿದ್ದು, ಬುಧವಾರವೂ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಬುಧವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ0.85ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.80ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 700.40ಅಂಕಗಳ ಏರಿಕೆಯೊಂದಿಗೆ 82,755.51 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 200.40 ಅಂಕಗಳ ಏರಿಕೆಯೊಂದಿಗೆ 25,244.75 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳ ನಡುವೆಯೇ ಜಾಗತಿಕ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟುಗಳು ನಡೆಯುತ್ತಿವೆ. ಪರಿಣಾಮ ಬುಧವಾರ ಬೆಂಚ್‌ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸುಮಾರು 1 ಪ್ರತಿಶತದಷ್ಟು ಏರಿಕೆಯಾಗಿವೆ.
ಇಂದಿನ ವಹಿವಾಟಿನಲ್ಲಿ ಆಟೋ, ಗ್ರಾಹಕ ಬೆಲೆಬಾಳುವ ವಸ್ತುಗಳು, ಐಟಿ, ಟೆಲಿಕಾಂ, ಆರೋಗ್ಯ ರಕ್ಷಣೆ, ಮಾಧ್ಯಮ ವಲಯದ ಎಲ್ಲಾ ಸೂಚ್ಯಂಕಗಳು ಶೇ. 1-2 ರಷ್ಟು ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದವು.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟೈಟಾನ್ ಕಂಪನಿ, ಇನ್ಫೋಸಿಸ್, ಎಂ & ಎಂ, ಗ್ರಾಸಿಮ್ ಇಂಡಸ್ಟ್ರೀಸ್, ಜೆಎಸ್ಡಬ್ಲ್ಯೂ ಸ್ಟೀಲ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಭಾರತ್ ಎಲೆಕ್ಟ್ರಾನಿಕ್ಸ್, ಕೋಟಕ್ ಮಹೀಂದ್ರಾ ಬ್ಯಾಂಕ್, ಐಷರ್ ಮೋಟಾರ್ಸ್, ಆಕ್ಸಿಸ್ ಬ್ಯಾಂಕ್, ಒಎನ್‌ಜಿಸಿ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.