ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

Indian Stock Market: ವಾರದ ವಹಿವಾಟು ಅಂತ್ಯ; Sensex 182 ಅಂಕ ಕುಸಿತ, IT, metal ಷೇರು ಮೌಲ್ಯ ಇಳಿಕೆ!

ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಇಳಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಷೇರುಮಾರುಕಟ್ಟೆ
Srinivasa Murthy VN
Updated On : 30 May 2025, 7:36 pm

ಮುಂಬೈ: ಭಾರತೀಯ ಷೇರುಮಾರುಕಟ್ಟೆ ವಾರದ ಅಂತಿಮ ದಿನ ಅಲ್ಪ ಮಟ್ಟದ ಕುಸಿತ ಕಂಡಿದ್ದು, IT, metal ಷೇರು ಮೌಲ್ಯದಲ್ಲಿ ಇಳಿಕೆ ಕಂಡುಬಂದಿದೆ.

ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಇಳಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.22ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.33ರಷ್ಟು ಇಳಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 182.02 ಅಂಕಗಳ ಇಳಿಕೆಯೊಂದಿಗೆ 81,451.01 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 82.90 ಅಂಕಗಳ ಇಳಿಕೆಯೊಂದಿಗೆ 24,750.70 ಅಂಕಗಳಿಗೆ ಇಳಿಕೆಯಾಗಿ ದಿನದ ಹಾಗೂ ವಾರದ ವಹಿವಾಟು ಅಂತ್ಯಗೊಳಿಸಿದೆ.

Advertisement

Advertisement

ಇಂದಿನ ವಹಿವಾಟಿನಲ್ಲಿ ಐಟಿ, ಮೆಟಲ್ ಷೇರುಗಳ ಮೌಲ್ಯ ಇಳಿಕೆಯಾಗಿದ್ದು, ಏಷ್ಯಾದ ಮಾರುಕಟ್ಟೆಗಳಲ್ಲಿನ ನಿಧಾನಗತಿಯ ಪ್ರವೃತ್ತಿಯಿಂದಾಗಿ ಶುಕ್ರವಾರ ಷೇರು ಮಾರುಕಟ್ಟೆಗಳು ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದೆ.

Also Read

GDP: 4ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.7.4ಕ್ಕೆ ಏರಿಕೆ; FY25 ಬೆಳವಣಿಗೆ 6.5% ಎಂದು ಅಂದಾಜು!

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಎಟರ್ನಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ ಬ್ಯಾಂಕ್, ಲಾರ್ಸೆನ್ & ಟೂಬ್ರೊ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಬಜಾಜ್ ಫಿನ್‌ಸರ್ವ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.

ಅಂತೆಯೇ ಟೆಕ್ ಮಹೀಂದ್ರಾ ಶೇ. 1.73 ರಷ್ಟು ಹೆಚ್ಚು ಕುಸಿದಿದ್ದು, ಎಚ್‌ಸಿಎಲ್ ಟೆಕ್, ಏಷ್ಯನ್ ಪೇಂಟ್ಸ್, ಎನ್‌ಟಿಪಿಸಿ, ಇನ್ಫೋಸಿಸ್, ನೆಸ್ಲೆ, ಸನ್ ಫಾರ್ಮಾ ಮತ್ತು ಟಾಟಾ ಸ್ಟೀಲ್ ಸಹ ಕುಸಿತದೊಂದಿಗೆ ಮುಕ್ತಾಯಗೊಂಡವು. ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement